--ಇಲ್ಲಿ ಜಾಹೀರಾತು--

ಶಾಸಕ ಶಿವಗಂಗಾ ಪಿಎ ಆತ್ಮಹತ್ಯೆ

On: March 9, 2026 2:31 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಆಪ್ತ ಸಹಾಯಕರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ದಾವಣಗೆರೆಯ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಮೃತ ಶಿವಕುಮಾರ್ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಕೈತುಂಬಾ ಸಾಲ ಮಾಡಿಕೊಂಡಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ ನನಗೆ ಜೀವನ ಸಾಕಾಗಿದೆ ಸಾಯುತ್ತೀನಿ ಎಂದು ಹೇಳಿದ್ದರು ಎನ್ನಲಾಗಿದೆ. ನಗರದ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now