--ಇಲ್ಲಿ ಜಾಹೀರಾತು--

ಅಂಗನವಾಡಿ ಹುದ್ದೆಗಳ ಭರ್ತಿಗೆ 90 ದಿನ ಗಡುವು: ಹೆಬ್ಬಾಳ್ಕರ್

On: March 11, 2026 2:25 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ರಾಜ್ಯದ ಅಂಗನವಾಡಿಗಳ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ವಿಧಾನಸಭೆಯಲ್ಲಿ ಬುಧವಾರ ಪ್ರಶ್ತೋತ್ತರ ಕಲಾಪದಲ್ಲಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.
ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಮಾಹಿತಿ ನೀಡಿದರು.
ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now