ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಮತ್ತು ಜಮೀರ್ ಅಹಮದ್ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿ ಸಂಧಾನ ಮಾಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಇಬ್ಬರನ್ನೂ ಅಕ್ಕಪಕ್ಕ ಕೂರಿಸಿಕೊಂಡು ಮಾತನಾಡಿಸಿದ್ದಾರೆ. ಬಹಿರಂಗವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಮಾತನಾಡದಂತೆ ಸಿಎಂ ಸೂಚಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅಲ್ಪಸಂಖ್ಯಾತರಿಗೆ ನೀಡಬೇಕೆಂದು ಜಮೀರ್ ಹೇಳಿದ್ದರು. ಇದಕ್ಕೆ ಸಿಟ್ಟಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು, ನಮ್ಮ ಕ್ಷೇತ್ರದಲ್ಲಿ ಬಂದು ಮಾತನಾಡಲು ಅವನ್ಯಾರು ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು.
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಪಕ್ಷದ ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಶಾಸಕರು ಇಂದಿನ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಬಿಜೆಪಿ ಶಾಸಕರಾದ ಎಸ್ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಡಿನ್ನರ್ ಪಾರ್ಟಿಗೆ ಹಾಜರಾಗಿದ್ದರು.
ಟಿಕೆಟ್ ಫೈಟ್: ಮಲ್ಲಿಕಾರ್ಜುನ್- ಜಮೀರ್ ನಡುವೆ ಸಿಎಂ ಸಂಧಾನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


