--ಇಲ್ಲಿ ಜಾಹೀರಾತು--

ದಯಾಮರಣಕ್ಕೆ ಸುಪ್ರೀಂ ಅನುಮತಿ

On: March 11, 2026 2:34 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: 13 ವರ್ಷದಿಂದ ಕೋಮಾದಲ್ಲಿರುವ 32 ವರ್ಷದ ವ್ಯಕ್ತಿಯ ದಯಾಮರಣಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.
ಘನತೆ ಕಾಪಾಡಿಕೊಳ್ಳುವುದರ ಜತೆಗೆ ಸೂಕ್ತ ಯೋಜನೆಯೊಂದಿಗೆ ಹರೀಶ್ ರಾಣಾ ಅವರ ವೈದ್ಯಕೀಯ ಚಿಕಿತ್ಸೆಯನ್ನು ಹಿಂಪಡೆಯಬಹುದು ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ದೆಹಲಿಯ ಏಮ್ಸ್ಗೆ ನಿರ್ದೇಶನ ನೀಡಿದೆ.
2013ರಲ್ಲಿ ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ಪೆಟ್ಟಾಗಿ ಹರೀಶ್ ರಾಣಾ ಅವರು ಕೋಮಾಗೆ ಹೋಗಿದ್ದರು. ತಕ್ಷಣ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. ಹರೀಶ್ ಒಂದು ದಶಕಕ್ಕೂ ಹೆಚ್ಚು ಕಾಲ ಕೋಮಾದಲ್ಲಿದ್ದರು. 2025ರ ಡಿಸೆಂಬರ್ 11ರಂದು ಹರೀಶ್ ಚೇತರಿಸಿಕೊಳ್ಳುವ ಸಾಧ್ಯತೆ ತೀರಾ ಕಡಿಮೆ ಎಂದು ಏಮ್ಸ್ನ ವೈದ್ಯಕೀಯ ಮಂಡಳಿ ಹೇಳಿತ್ತು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now