
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಟೀಕಿಸಿದರು.
ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ. ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಹೇಗೋ ಈಗಾಗಲೇ ಗ್ಯಾಸ್ ಚಾಲಿತ ಆಟೋಗಳು ಬಂದ್ ಆಗಿವೆ. ಸಮಸ್ಯೆ ಹೆಚ್ಚುತ್ತಿದೆ ಎಂದು ಹೇಳಿದರು.
ಗ್ಯಾಸ್ ಸಮಸ್ಯೆ: ಬಿಜೆಪಿ ಸಂಸದರು ಸಂಸತ್ತಿನಲ್ಲಿ ಮಾತಾಡಲಿ- ಡಿಕೆಶಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


