
ರಾಮನಗರ: ಗ್ಯಾಸ್ ಸಿಲಿಂಡರ್ ಸರಬರಾಜು ವಾಹನದಲ್ಲಿ ಸಿಲಿಂಡರ್ ಕದ್ದು ಎಸ್ಕೇಪ್ ಆಗಿದ್ದ ಇಬ್ಬರು ಕಳ್ಳರನ್ನು ಬಿಡದಿ ಪೊಲಿಸರು ಬಂಧಿಸಿದ್ದಾರೆ. ಮಹೇಶ್ ನಾಯಕ್ (19), ಗೋವಿಂದರಾಜು (20) ಬಂಧಿತ ಆರೋಪಿಗಳು. ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆಮುಂದೆ ನಿಂತಿದ್ದ ಗ್ಯಾಸ್ ಸರಬರಾಜು ವಾಹನದಲ್ಲಿ 8 ಸಿಲಿಂಡರ್ ಕದ್ದು ಖದೀಮರು ಎಸ್ಕೇಪ್ ಆಗಿದ್ದರು. ಈ ಸಂಬAಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಆರೋಪಿಗಳಿಂದ 8 ಗ್ಯಾಸ್ ಸಿಲಿಂಡರ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 1 ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಕಳ್ಳರ ಬಂಧನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


