--ಇಲ್ಲಿ ಜಾಹೀರಾತು--

ಉಸಿರಿರುವವರೆಗೂ ರಾಜಕೀಯ ಬಿಡಲ್ಲ ಸೋತಾಗಲೂ ಜನರ ಸೇವೆ ಬಿಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

On: March 13, 2026 2:30 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನಾನು ರಾಜಕೀಯದಲ್ಲಿ ಹಲವು ಸೋಲು-ಗೆಲವು ಕಂಡಿದ್ದೇನೆ. ಸೋತಾಗಲೂ ಜನರ ಸೇವೆ ಬಿಟ್ಟಿಲ್ಲ. ಜನರ ಸೇವೆ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ನನ್ನಿಂದ ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನಿಮ್ಮ ಕಷ್ಟಸುಖಕ್ಕೆ ಅವರು ಸ್ಪಂದಿಸುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ ಎಂದು ಕ್ಷೇತ್ರದ ಜನರಿಗೆ ಮನವಿ ಮಾಡಿದರು.
ಗ್ರಾಮದ ಮುಖಂಡರು ಹೆಲಿಪ್ಯಾಡ್ ಬಳಿಯಿಂದ ಸಿದ್ದರಾಮಯ್ಯ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ದೇಗುಲದ ಆವರಣಕ್ಕೆ ಕರೆತಂದರು. ದೇವಸ್ಥಾನದ ಪ್ರವೇಶದ್ವಾರದ ಬಳಿ ಸೇಬುಗಳಿಂದ ಸಿದ್ಧಪಡಿಸಿದ ದೊಡ್ಡದಾದ ಹಾರವನ್ನು ಕ್ರೇನ್‌ನಲ್ಲಿ ಹಾಕಿ ಪುಷ್ಪಮಳೆಗರೆದು ಅಭಿಮಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಇದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now