--ಇಲ್ಲಿ ಜಾಹೀರಾತು--

ಅಭಿವೃದ್ಧಿ ಮೂಲಕವೇ ವಿಪಕ್ಷಗಳ ಟೀಕೆಗೆ ಉತ್ತರ: ಸಚಿವ ಪರಮೇಶ್ವರ್

On: March 16, 2026 2:20 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೊರಟಗೆರೆ:
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿಯಿAದ ಅಭಿವೃದ್ಧಿಗೆ ಹಣವಿಲ್ಲ ಎಂಬ ವಿಪಕ್ಷಗಳ ಆರೋಪ ಸುಳ್ಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಹೇಳಿದರು.
ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದಲ್ಲಿ ಹಣವೇ ಇಲ್ಲದಿದ್ದರೆ ಕೊರಟಗೆರೆ ಕ್ಷೇತ್ರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ತರಲು ಸಾಧ್ಯವಾಗುತ್ತಿತ್ತೆ? ಒಂದು ಬಜೆಟ್ ಅವಧಿಯಲ್ಲೇ ಸುಮಾರು 218 ಕೋಟಿ ಅನುದಾನವನ್ನು ಕೊರಟಗೆರೆ ಕ್ಷೇತ್ರಕ್ಕೆ ತರಲಾಗಿದೆ. ಟೀಕೆ ಮಾಡುವವರಿಗೆ ಅಭಿವೃದ್ಧಿ ಕೆಲಸಗಳ ಮೂಲಕವೇ ಉತ್ತರ ನೀಡುತ್ತೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಸಹಿಸಲಾಗದೆ ವಿರೋಧ ಪಕ್ಷಗಳು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿವೆ ಎಂದು ಸಚಿವರು ಹೇಳಿದರು.
ಕ್ರೀಡಾ ಇಲಾಖೆ ಆಯುಕ್ತ ಆರ್.ಚೇತನ್ ಮಾತನಾಡಿ, ಕೊರಟಗೆರೆಯಲ್ಲಿ ಒಳಾಂಗಣ ಕ್ರೀಡಾಂಗಣವನ್ನು ಜಿಲ್ಲಾಮಟ್ಟದ ಕ್ರೀಡಾಂಗಣದ ಮಾದರಿಯಲ್ಲಿ ನಿರ್ಮಿಸಲಾಗಿದೆ. ಇಂತಹ ಸೌಲಭ್ಯ ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿಲ್ಲ. ಕೆಲವೇ ತಿಂಗಳಲ್ಲಿ ಇಲ್ಲಿನ ಮೈದಾನವನ್ನು ಸುಸಜ್ಜಿತ ಹೊರಾಂಗಣ ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ವಿ.ಅಶ್ವಿಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಕೆ.ಮಂಜುನಾಥ್ ಇತರರು ಇದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now