--ಇಲ್ಲಿ ಜಾಹೀರಾತು--

ಸ್ಪಿಕರ್ ಖಾದರ್ ಸಭಾತ್ಯಾಗ

On: March 16, 2026 2:31 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು, ಅಧಿಕಾರಿಗಳ ವಿರುದ್ಧ ಅಸಮಾಧಾನ

ಬೆಂಗಳೂರು: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಸಭಾತ್ಯಾಗ ಮಾಡಿದ ಪ್ರಸಂಗ ನಡೆದಿದೆ.
ಶಾಸಕರ ಲಿಖಿತ ಪ್ರಶ್ನೆಗಳಿಗೆ ಸಚಿವರು ಮತ್ತು ವಿಧಾನಸಭೆ ಕಾರ್ಯದರ್ಶಿಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸ್ಪೀಕರ್ ಸಿಟ್ಟಾಗಿ ಕಲಾಪದಿಂದ ಹೊರ ನಡೆದರು. ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಗೃಹ ಸಚಿವ ಪರಮೇಶ್ವರ್ ಅವರು ಲಿಖಿತ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಸದನ ಆರಂಭವಾದಾಗಿನಿಂದ ಸಚಿವರಿಂದ ಸರಿಯಾದ ಉತ್ತರ ಬರುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತ ಅಶೋಕ್ ಆಕ್ರೋಶ ಹೊರ ಹಾಕಿದರು.

ಸಚಿವರು ಗೈರಾಗಿದ್ದಕ್ಕೆ ಮೊದಲೇ ಸಿಟ್ಟಾಗಿದ್ದ ಸ್ಪೀಕರ್, ಸದನದಲ್ಲಿ ಶಾಸಕರು ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗುವುದಿಲ್ಲ. ಚುಕ್ಕೆ ಗುರುತಿಲ್ಲದ ಪ್ರಶ್ನೆಯೇ ಜಾಸ್ತಿ. ಗಮನ ಸೆಳೆಯುವ ಸೂಚನೆಗೂ ಸಚಿವರು ಉತ್ತರ ನೀಡುವುದಿಲ್ಲ. ಸಚಿವರು ಹೀಗೆ ಮಾಡಿದರೆ ಹೇಗೆ? ಮೂರು ಸಲ ನಾನು ಸಚಿವರಿಗೆ ಹೇಳಿದರೂ ಸುಧಾರಣೆ ಕಂಡು ಬರುತ್ತಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ, ಕಾರಣ ಕೊಡಬೇಕು. ಅಲ್ಲಿಯವರೆಗೂ ನಾನು ಸದನ ನಡೆಸುವುದಿಲ್ಲ ಎಂದು ಗರಂ ಆಗಿ ಹೇಳಿ ಸದನದಿಂದ ಹೊರನಡೆದರು.
ಯು.ಟಿ.ಖಾದರ್ ಅವರು ಸದನದಿಂದ ಹೊರನಡೆದ ಬೆನ್ನಲ್ಲೇ ಸ್ಪೀಕರ್ ಕೊಠಡಿಯಲ್ಲಿ ಸಿಎಂ, ಸಚಿವರು, ವಿಪಕ್ಷ ನಾಯಕರು ಯುಟಿ ಖಾದರ್ ಜೊತೆ ಸಭೆ ನಡೆಸಿದರು. ಸ್ಪೀಕರ್ ಜೊತೆ ಸಿಎಂ ಸಿದ್ದರಾಮಯ್ಯ ಸಂಧಾನ ಮಾಡಿದರು. ಸ್ಪೀಕರ್ ಜೊತೆ ಕುಳಿತ ಸಚಿವರು ಸದನ ಸೂಕ್ತ ರೀತಿಯಲ್ಲಿ ನಡೆಸಲು ತಮ್ಮಿಂದ ಸಂಪೂರ್ಣ ಸಹಕಾರ ನಿಡುವ ಭರವಸೆ ನೀಡಿದರು. ಅಷ್ಟೇ ಅಲ್ಲದೇ ಶಾಸಕರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡುವ ಸ್ಪಷ್ಟನೆ ನೀಡಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now