
ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರೊಂದಿಗೆ ನಾನು ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ನವದೆಹಲಿಗೆ ತೆರಳುವ ಮುನ್ನ ಮಂಗಳವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರೂ ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಮೇಕೆದಾಟು, ಮಹಾದಾಯಿ ನದಿಗೆ ಅಡ್ಡಲಾಗಿ ಕಳಸಾ-ಬಂಡೂರಿ ನಾಲಾ ಯೋಜನೆ ಸಂಬAಧಪಟ್ಟAತೆ ಕೇಂದ್ರ ಸರ್ಕಾರದ ಎನ್ಓಸಿಗಳು ಬಾಕಿ ಇದೆ. ಅದಕ್ಕಾಗಿ ಒತ್ತಡ ಹೇರುವಂತೆ ಮನವಿ ಸಲ್ಲಿಸಲಿದ್ದಾರೆ. ಬೆಂಗಳೂರಿನ ನಗರಾಭಿವೃದ್ಧಿ ಹಾಗೂ ಇತರ ಯೋಜನೆಗಳ ಸಂಬAಧಪಟ್ಟAತೆಯೂ ಸಂಸದರ ಜೊತೆ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸುವುದಾಗಿ ತಿಳಿಸಿದರು.
ನೀರಾವರಿ ಯೋಜನೆಗಳ ಜಾರಿಗೆ ಸಂಸದರ ಜೊತೆ ಚರ್ಚೆ: ಡಿಕೆಶಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


