
ದಾವಣಗೆರೆ: ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಂ ನಾಯಕರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಂ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ಗೆ ಟಿಕೆಟ್ ನೀಡಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್ಗೆ ಬಿಸಿ ಮುಟ್ಟಿಸಲು ಮುಸ್ಲಿಂ ಮುಖಂಡರು ಮುಂದಾಗಿದ್ದಾರೆ.
ಕೈ ವಿರುದ್ಧ ಬಂಡಾಯ: 23 ಮುಸ್ಲಿಂ ಮುಖಂಡರ ನಾಮಪತ್ರ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


