
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಟೇಕಾಫ್ ಆದ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ.
ನಗರ ಕೇಂದ್ರದಿAದ ಕೇವಲ 3 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ. ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಎಕ್ಸ್ನಲ್ಲಿ ಪೋಸ್ಟ್ ಮಾಡಿ ವಿಮಾನದಲ್ಲಿದ್ದ ಇನ್ನೂ 40ಕ್ಕೂ ಹೆಚ್ಚು ಜನರ ಸ್ಥಿತಿಯನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ತಿಳಿಸಿದ್ದಾರೆ.
ಮಿಲಿಟರಿ ವಿಮಾನ ಪತನ: 66 ಜನರು ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


