ತುಮಕೂರು: ಆರೋಗ್ಯ ಜಾಗೃತಿ ವಸ್ತು ಪ್ರದರ್ಶನ ಬಿಲ್ ಪಾವತಿಗೆ ಲಂಚ ಪಡೆಯುವಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಡಿಎಚ್ಒ ಕಚೇರಿ ಆವರಣದಲ್ಲಿ ಕೆ.ರಾಜಶೇಖರ್ ಎಂಬುವರಿದ 12 ಸಾವಿರ ಲಂಚದ ಹಣ ತೆಗೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಂತರ ಬಂಧಿಸಿದ್ದಾರೆ.
ತಿಪಟೂರಿನ ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ರಾಜಶೇಖರ್, 2025-26ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲೆಯ ಎಲ್ಲ 10 ತಾಲ್ಲೂಕುಗಳಲ್ಲಿ ನಡೆಯುವ ಜಾತ್ರೆ, ಸಂತೆಗಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ವಸ್ತು ಪ್ರದರ್ಶನ ನಡೆಸಿಕೊಟ್ಟಿದ್ದರು. ಈ ಸಂಬAಧ 1.98 ಲಕ್ಷ ಬಿಲ್ ಪಾವತಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಬಿಲ್ ಹಣ ಪಾವತಿ ಮಾಡಲು 12 ಸಾವಿರ ಲಂಚ ನೀಡುವಂತೆ ಅರವಿಂದ್ ಒತ್ತಾಯಿಸಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ರಾಜಶೇಖರ್ ದೂರು ನೀಡಿದ್ದರು. ಬುಧವಾರ ಸಂಜೆ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಸಿಕ್ಕಿ ಬಿದ್ದಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ವಿ.ಲಕ್ಷ್ಮಿನಾರಾಯಣ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಕೆ.ಎಂ.ಸಂತೋಷ್, ಎಂ.ಮಂಜುನಾಥ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಟಿ.ರಾಜು, ಬಿ.ಮೊಹಮ್ಮದ್ ಸಲೀಂ ತಂಡ ಕಾರ್ಯಾಚರಣೆ ನಡೆಸಿತ್ತು.
ಲೋಕಾಯಕ್ತ ಬಲೆಗೆ ಬಿದ್ದ ಡಿಎಚ್ಒ ಕಚೇರಿ ಅಧೀಕ್ಷಕ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


