
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಹಿರಿಯ ಸಾಹಿತಿಗಳಿಗೆ ನೀಡಲಾಗುವ ಕರ್ನಾಟಕ ಸಾಹಿತ್ಯ ಅಕಾಡೆಮಿ ವರ್ಷದ ಗೌರವ ಪ್ರಶಸ್ತಿಗೆ ಪ್ರೊ.ಶಿವರಾಮಯ್ಯ, ಚಂದ್ರಶೇಖರ ತಾಳ್ಯ, ಡಾ. ಚಂದ್ರಶೇಖರ ಪೋಕಳೆ, ಡಾ.ವಸುಂಧರಾ ಭೂಪತಿ ಹಾಗೂ ಡಾ.ಎಸ್.ತುಕಾರಾಂ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 50 ಸಾವಿರ ನಗದು ಒಳಗೊಂಡಿದೆ.
50ರಿAದ 60 ವರ್ಷ ವಯೋಮಾನದ ಸಾಹಿತಿಗಳಿಗೆ ನೀಡಲಾಗುವ ಸಾಹಿತ್ಯ ಶ್ರೀ ಪ್ರಶಸ್ತಿಗೆ ಬಿ.ಎಂ. ಬಷೀರ್, ಕಂಕನಾಡಿ ನಾರಾಯಣ ಸೇರಿದಂತೆ 10 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 25 ಸಾವಿರ ನಗದು ಒಳಗೊಂಡಿದೆ. 2024ರಲ್ಲಿ ಪ್ರಕಟಗೊಂಡಿರುವ 17 ವಿವಿಧ ಸಾಹಿತ್ಯ ಪ್ರಕಾರದ ಕೃತಿಗಳು 2024ನೇ ಸಾಲಿನ ವರ್ಷದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿವೆ. ಈ ಪ್ರಶಸ್ತಿಯು 25 ಸಾವಿರ ನಗದು ಒಳಗೊಂಡಿದೆ. 11 ದತ್ತಿ ಸಾಹಿತ್ಯ ಪ್ರಕಾರಗಳಿಗೆ ನೀಡಲಾಗುವ 2024ನೇ ಸಾಲಿನ ಅಕಾಡಮಿ ದತ್ತಿ ಬಹುಮಾನ ಪುರಸ್ಕೃತರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ.
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


