
ಬೆಂಗಳೂರು: ಬೆಂಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಎರಡು ದಿನ ಮಳೆ ಸಾಧ್ಯತೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


