
ಧಾರವಾಡ: ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್ ಕ್ಯಾನ್ಗೆ ಬೆಂಕಿ ತಗುಲಿ ಗೃಹಿಣಿ ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ತೀವ್ರವಾಗಿ ಗಾಯಗೊಂಡಿದ್ದಾರೆ. ಶೇ.80ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಅನ್ನು ಕ್ಯಾನ್ನಲ್ಲಿ ಸಂಗ್ರಹಿಸಿ ಮನೆಯ ಫ್ರಿಡ್ಜ್ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿದ್ದಾಗ ಏಕಾಏಕಿ ಕ್ಯಾನ್ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ. ಇಡೀ ಮನೆಗೆ ಬೆಂಕಿ ಆವರಿಸಿದೆ. ಅಡುಗೆ ಮನೆಯಲ್ಲಿ ಸಿಲುಕಿದ್ದ ಅತ್ತಿಗೆಯನ್ನು ಮೈದುನ ಯಲ್ಲಪ್ಪ ಕಾಪಾಡಿದ್ದಾರೆ. ಈ ವೇಳೆ ಅವನಿಗೂ ಗಾಯಗಳಾಗಿವೆ. ಆದರೆ ಮಹಿಳೆ ಸ್ಥಿತಿ ಮಾತ್ರ ಗಂಭೀರವಾಗಿದೆ. ಮನೆಯ ಇತರ ಸದಸ್ಯರು ಹೊರಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ.
ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹೊತ್ತಿ ಮಹಿಳೆ ಸ್ಥಿತಿ ಗಂಭೀರ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


