ಕಾಡಾನೆ ದಾಳಿಯಿಂದ ಹಾಡಿ ಮಹಿಳೆ ಸಾವು

ಮಡಿಕೇರಿ: ಹಾಡಹಗಲೇ ಕಾಡಾನೆ ದಾಳಿ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ಹಾಡಿಯ ನಿವಾಸಿ ಜಲಜಾಕ್ಷಿ ಮೃತ ದುರ್ದೈವಿ. ಸೋಮವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಅರಣ್ಯ ಉತ್ಪನ್ನಗಳ ಸಂಗ್ರಹಕ್ಕೆ ತಮ್ಮ ಮನೆಯಂಗಳದ ಆಸುಪಾಸಿನ ಅರಣ್ಯಕ್ಕೆ ತೆರಳಿ ಸೀಗೆ ಹೆರಕುತ್ತಿದ್ದಾಗ ಧಾವಿಸಿದ ಕಾಡಾನೆ ಒಂದೇ ಸಮನೆ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕುಶಾಲನಗರ ಅರಣ್ಯಾಧಿಕಾರಿಗಳು … Read more

ವೃದ್ಧೆ ಕೊಲೆ ಮಾಡಿ ಚಿನ್ನಾಭರಣ ದರೋಡೆ

ಚಾಮರಾಜನಗರ: ಚಿನ್ನದಾಸೆಗೆ ವೃದ್ಧೆಯನ್ನು ಕೊಲೆ ಮಾಡಿ ಚಿನ್ನದ ಸರ, ಓಲೆ, ನಗದನ್ನು ಕಳ್ಳತನ ಮಾಡಿರುವ ಘಟನೆ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ. ಸಿದ್ದಮ್ಮ (70) ಮೃತ ದುರ್ದೈವಿ. ಮನೆಯಲ್ಲಿದ್ದ 20 ಗ್ರಾಂ ಚಿನ್ನದ ಸರ, 10 ಗ್ರಾಂ ಓಲೆ, 50 ಸಾವಿರ ನಗದು ಕಳವಾಗಿದೆ. ರಾತ್ರಿ ಮಲಗಿದ ವೇಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ ಕರೆ ಮಾಡಿ ಮಾತಾಡಿದ್ದೆ. ಊಟ ಮಾಡಿ ನಮ್ಮ ತಾಯಿ ಮಲಗಿದ್ದಳು. ಬೆಳಗ್ಗೆ ಪಕ್ಕದ ಮನೆಯವರು ನಿಮ್ಮ ತಾಯಿ … Read more

ಶಾಸಕ ಶಿವಗಂಗಾ ಪಿಎ ಆತ್ಮಹತ್ಯೆ

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಆಪ್ತ ಸಹಾಯಕರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ದಾವಣಗೆರೆಯ ಶಿವಕುಮಾರ್ ಎಂದು ಗುರುತಿಸಲಾಗಿದೆ. ಮೃತ ಶಿವಕುಮಾರ್ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಕೈತುಂಬಾ ಸಾಲ ಮಾಡಿಕೊಂಡಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ ನನಗೆ ಜೀವನ ಸಾಕಾಗಿದೆ ಸಾಯುತ್ತೀನಿ ಎಂದು … Read more

ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ಡಾಲರ್ಗೆ ಬೇಡಿಕೆ ಹೆಚ್ಚಳದಿಂದಾಗಿ ಸೋಮವಾರ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 92.20ಕ್ಕೆ ಆರಂಭವಾಗಿ, ಆರಂಭಿಕ ವಹಿವಾಟಿನಲ್ಲಿ ಪ್ರತಿ ಯುಎಸ್ ಡಾಲರ್ಗೆ 92.528 ರೂ.ಗೆ ಮತ್ತಷ್ಟು ದುರ್ಬಲಗೊಂಡಿದೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ಕಚ್ಚಾ ತೈಲವನ್ನು ಬ್ಯಾರೆಲ್ಗೆ 118 ಡಾಲರ್ಗೆ ಏರಿದೆ. ಇದು ರೂಪಾಯಿ ಮೇಲೆ ಒತ್ತಡ ಹೇರಿದೆ ಎಂದು ವಿಶ್ಲೇಷಿಸಲಾಗಿದೆ. ಕಚ್ಚಾ … Read more

ಮುಖ್ಯಮಂತ್ರಿ ಕುರ್ಚಿಗಾಗಿ ಇಂದು ದೆಹಲಿಯತ್ತ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಭಾನುವಾರ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ನಾಳೆ ಡಿ.ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನೆ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಕಲಬುರಗಿಯಿಂದ ದೆಹಲಿಗೆ ಪ್ರಯಾಣಿಸಲಿದ್ದಾರೆ. ನೀರಾವರಿ ಇಲಾಖೆ ಕೆಲವು ಕೆಲಸದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೂ ಬಜೆಟ್ ಮಂಡನೆ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷರ ಜೊತೆ ಡಿಕೆಶಿ ದೆಹಲಿಗೆ ಹೋಗುತ್ತಿರುವುದು … Read more

ಗ್ಯಾಸ್ ಸಿಲಿಂಡರ್ ಬೆಲೆ 60 ರೂ. ವಾಣಿಜ್ಯ 115 ರೂ. ಹೆಚ್ಚಳ

ನವದೆಹಲಿ: ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಶನಿವಾರ ಕೇಂದ್ರ ಸರ್ಕಾರ ದಿಢೀರ್ ಎಂದು ಹೆಚ್ಚಿಸಿದೆ. 14.2 ಕೆಜಿ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ ದೇಶಾದ್ಯಂತ 60 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ ದೇಶದ ಮಹಿಳೆಯರಿಗೆ ಕೇಂದ್ರ ಶಾಕ್ ನೀಡಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯೂ 115 ರೂಪಾಯಿ ಹೆಚ್ಚಿಸಲಾಗಿದೆ, ಇದರಿಂದ ಹೋಟೆಲ್, ರೆಸ್ಟೋರೆಂಟ್ಗಳು ಮತ್ತು ಸಣ್ಣ ವಾಣಿಜ್ಯ ಸಂಸ್ಥೆಗಳ ಮೇಲೆ ಪರಿಣಾಮ ಬೀಳಲಿದೆ. ಬೆಂಗಳೂರು ನಗರದಲ್ಲಿ ಸಬ್ಸಿಡಿ ಇಲ್ಲದ ಎಲ್ಪಿಜಿ … Read more

ಅರಳೀ ಮರಕ್ಕೆ ಲಾರಿ ಡಿಕ್ಕಿ: ಚಾಲಕ ಸೇರಿ ಇಬ್ಬರು ಸಾವು

ತುಮಕೂರು: ತಾಲ್ಲೂಕಿನ ನಾಗವಲ್ಲಿ ಸಮೀಪದ ರಂಗಾಪುರ ಬಳಿಯ ಸೋಪನಹಳ್ಳಿ ಗೇಟ್ನಲ್ಲಿ ಶನಿವಾರ ಅರಳೀ ಮರಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಕೇರಳದ ರಷೀದ್ ಅಲಿ (25), ಅಮೀನ್ (23) ಮೃತಪಟ್ಟವರು. ಆಂಧ್ರಪ್ರದೇಶದಿAದ ಕೇರಳಕ್ಕೆ ಲಾರಿಯಲ್ಲಿ ಕಡಪ ಕಲ್ಲು ಸಾಗಿಸುತ್ತಿದ್ದರು. ಚಾಲಕನ ನಿಯಂತ್ರಣದ ತಪ್ಪಿದ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಕುಣಿಗಲ್ – ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. … Read more

ಜಾಗತಿಕ ಇಂಧನ ಬಿಕ್ಕಟ್ಟು: ರಷ್ಯಾದಿಂದ ಕಚ್ಚಾತೈಲ ಆಮದು

ನವದೆಹಲಿ: ಭಾರತ ರಷ್ಯಾದಿಂದ 2022ರಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. 2022ರಲ್ಲಿ ಭಾರತದ ಒಟ್ಟು ಕಚ್ಚಾ ತೈಲ ಆಮದುಗಳಲ್ಲಿ ರಷ್ಯಾದ ಪಾಲು ಕೇವಲ 0.2 ಶೇಕಡಾ ಮಾತ್ರವಾಗಿದ್ದರೆ, ನಂತರದ ವರ್ಷಗಳಲ್ಲಿ ಅದು ಗಣನೀಯವಾಗಿ ಹೆಚ್ಚಾಗಿದೆ. ಫೆಬ್ರವರಿಯಲ್ಲಿ, ಭಾರತ ತನ್ನ ಒಟ್ಟು ಕಚ್ಚಾ ತೈಲ ಆಮದುಗಳಲ್ಲಿ ಸುಮಾರು ಶೇ.20ರಷ್ಟನ್ನು ರಷ್ಯಾದಿಂದ ಆಮದು ಮಾಡಿದೆ. ಅದು ದಿನಕ್ಕೆ ಸುಮಾರು 10.4 ಲಕ್ಷ ಬ್ಯಾರೆಲ್ಗಳಷ್ಟಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಎಲ್ಪಿಜಿ ಕ್ಷೇತ್ರದಲ್ಲಿಯೂ, ದೇಶಾದ್ಯಂತ ಸಮರ್ಪಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಎಲ್ಪಿಜಿ … Read more

ಪವಿತ್ರಾಗೌಡ ಅಂಡ್ ಟೀಂಗೆ ಹೈಕೋರ್ಟ್ ಶಾಕ್

ಬೆಂಗಳೂರು: ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾಗೌಡ ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ಶಾಕ್ ನೀಡಿದ್ದು, ’ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಮನೆ ಊಟ, ಕೋರಿಕೆ ಮೇರೆಗೆ ಅಲ್ಲ’ ಎಂದು ಖಡಕ್ ಸಂದೇಶ ನೀಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಹಾಗೂ ಲಕ್ಷ್ಮಣ್ ಮೂವರು ಆರೋಪಿಗಳಿಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ವಾರಕ್ಕೊಮ್ಮೆ ಹಾಗೂ ವೈದ್ಯಕೀಯ ಕಾರಣಗಳಿಂದ ಮನೆ ಊಟ ತರಿಸಿಕೊಳ್ಳಬಹುದು ಎಂಬ ಕೆಳ ಹಂತದ … Read more

ಲಾರಿಗೆ ಕಾರು ಡಿಕ್ಕಿ: ಐವರು ಸಾವು

ಚಿತ್ತೂರು: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ನಡೆದಿದ್ದು, ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಮೃತರನ್ನು ಮೋಹನ್ದಾಸ್ (71), ನಾಗರಾಜ್ (61) ಕುಸುಮಾ (61) ಜಯಂತಿ (59) ಪೂಜಾ (33) ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಬೆಂಗಳೂರಿನಿಂದ ತಿರುಪತಿ ದೇಗುಲಕ್ಕೆ ತೆರಳುತ್ತಿದ್ದಾಗ ಈ … Read more