ನಾಮಪತ್ರ ವಾಪಸ್ ಪಡೆಯಲ್ಲ: ಸಾಧಿಕ್

ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿರುವುದು ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿದೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಸಾಧಿಕ್, ನಾನು ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಅವರು ಸವಾಲು ಹಾಕಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿAದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು ನಾನಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದೆ … Read more

ಹಾರ್ಮುಜ್ ಜಲಸಂಧಿ ಓಪನ್: ಟ್ರಂಪ್ ಸುಳಿವು

ವಾಷಿಂಗ್ಟನ್: ಇರಾನ್ ನಮಗೆ ದೊಡ್ಡ ಗಿಫ್ಟ್ ಕೊಟ್ಟಿದೆ ಎಂದು ಹಾರ್ಮುಜ್ ಜಲಸಂಧಿ ಓಪನ್ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಬಗ್ಗೆ ಹೇಳಿಕೆ ನೀಡಿರುವ ಟ್ರಂಪ್, ಇರಾನ್ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಂತಾಗಿದೆ. ಇರಾನ್ ಅದ್ಭುತವಾದ ಕೆಲಸ ಮಾಡಿದೆ. ನಮಗೆ ಇರಾನ್ ದೊಡ್ಡ ಉಡುಗೊರೆ ನೀಡಿದೆ. ಇರಾನ್ ಅಮೆರಿಕಕ್ಕೆ ತೈಲ, ಅನಿಲಕ್ಕೆ ಸಂಬAಧಿಸಿದ ಹಾರ್ಮುಜ್ ಓಪನ್ ಮಾಡಿ ಉಡುಗೊರೆ ನೀಡಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್‌ನ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ … Read more

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್

ತುಮಕೂರು: ಬಸ್ ಹತ್ತಲು ಹೋದಾಗ ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಟೈರ್ ಹರಿದು ಕಾಲು ಮುರಿದಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತಾ (17) ಕಾಲು ಮುರಿದುಕೊಂಡಿರುವ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ. ತುಮಕೂರಿನಿಂದ ಮಧುಗಿರಿಗೆ ಬಸ್ ಹೊರಟಿತ್ತು. ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಕಾರಣ ನೂಕಾಟ ತಳ್ಳಾಟ ಉಂಟಾಗಿ ಅವಘಡ ಸಂಭವಿಸಿದೆ. ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಟೈರ್ ಹತ್ತಿದ ಪರಿಣಾಮ ಕಾಲು ಮುರಿದಿದೆ. ಅಂಬುಲೆನ್ಸ್ ಮೂಲಕ ಹರ್ಷಿತಾಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹರ್ಷಿತ ತುಮಕೂರಿನ ಸಿದ್ದರಾಮಯ್ಯ … Read more

ಪಿಎನ್‌ಜಿಗೆ ಬದಲಾವಣೆ ಕಡ್ಡಾಯ: ಕೇಂದ್ರದ ಆದೇಶ

ನವದೆಹಲಿ: ಒಂದೇ ಇಂಧನ ಮೂಲದ ಮೇಲಿನ ಅವಲಂಬನೆ ಕಡಿಮೆ ಮಾಡಲು ಪೈಪ್ಡ್ ನೈಸರ್ಗಿಕ ಅನಿಲ (ಪಿಎನ್‌ಜಿ) ಸಂಪರ್ಕ ಜಾಲ ಹೊಂದಿರುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ಸ್ಥಗಿತಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಗ್ರಾಹಕರು ಪೈಪ್ಡ್ ನೈಸರ್ಗಿಕ ಅನಿಲಕ್ಕೆ ಬದಲಾಯಿಸಲು ವಿಫಲವಾದರೆ ಮನೆಗಳಿಗೆ ಅಡುಗೆ ಅನಿಲ ಪೂರೈಕೆಯನ್ನು ನಿಲ್ಲಿಸಲಾಗುವುದು. ಅಡುಗೆಮನೆ ಬರ್ನರ್‌ಗೆ ಪೈಪ್‌ಲೈನ್‌ಗಳ ಮೂಲಕ ಪಿಎನ್‌ಜಿಯನ್ನು ನಿರಂತರವಾಗಿ ಪೂರೈಸಲಾಗುತ್ತದೆ. ಇದು ಮರುಪೂರಣವನ್ನು ಕಾಯ್ದಿರಿಸುವ ಅಗತ್ಯವನ್ನು ನಿವಾರಿಸುತ್ತದೆ. ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಭಾರತ ಗ್ಯಾಸ್ ಕೊರತೆಯನ್ನು … Read more

ಹಲವು ಮೂಲದಿಂದ ಇಂಧನ ಖರೀದಿ ಯತ್ನ: ಮೋದಿ ಭರವಸೆ

ನವದೆಹಲಿ: ಪಶ್ಚಿಮ ಏಷ್ಯಾ ಯುದ್ಧವು ಜಾಗತಿಕವಾಗಿ ಗಂಭೀರ ಇಂಧನ ಬಿಕ್ಕಟ್ಟು ಸೃಷ್ಟಿಸಿರುವುದರಿಂದ ಕೇಂದ್ರ ಸರ್ಕಾರ ಸಾಧ್ಯವಿರುವ ಎಲ್ಲ ಮೂಲಗಳಿಂದ ಇಂಧನ ಖರೀದಿಸಲು ಯತ್ನಿಸುತ್ತಿದೆ. ಮುಂದಿನ ದಿನಗಳಲ್ಲೂ ಪ್ರಯತ್ನ ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ರಾಜ್ಯಸಭೆಯಲ್ಲಿ ಮಂಗಳವಾರ ಹೇಳಿಕೆ ನೀಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಅತ್ಯಂತ ಕಳವಳಕಾರಿಯಾಗಿದೆ. ರಾಜತಾಂತ್ರಿಕ ಮಾತುಕತೆಯ ಮೂಲಕ ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಅವರು ಹೇಳಿದರು. ಯುದ್ಧದ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ಹಾರ್ಮುಜ್ ಜಲಸಂಧಿ … Read more

ಚಿನ್ನದ ಬೆಲೆ ಭಾರೀ ಇಳಿಕೆ

ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಕುಸಿತದತ್ತ ಸಾಗಿದೆ. ಹೀಗೆ ಸಾಗಿದರೆ 10 ಗ್ರಾಂಗೆ 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ. ಯುದ್ಧದ ಪರಿಣಾಮದಿಂದ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 30 ಸಾವಿರ ರೂ. ವರೆಗೆ ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ. ಚಿನ್ನದ ದರ ಇಂದು ಎಷ್ಟು * 24 ಕ್ಯಾರೆಟ್ … Read more

ಡಾ.ಸಮೀಕ್ಷಾ ಸಾವಿಗೆ ನ್ಯಾಯ: ಈಶ್ವರ್ ಖಂಡ್ರೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಕುಟುಂಬದವರಿಗೆ ಭರವಸೆ ನೀಡಿದರು. ಆನೇಕಲ್ ಸಮೀಪದ ಸಕಲವಾರದಲ್ಲಿರುವ ಡಾ.ಸಮೀಕ್ಷಾ ರೆಡ್ಡಿ ನಿವಾಸಕ್ಕೆ ತೆರಳಿದ್ದ ಸಚಿವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಇದು ಅತ್ಯಂತ ನೋವಿನ ಸಂಗತಿ. ಸರ್ಕಾರ ಈ ನೋವಿನ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಲ್ಲುತ್ತದೆ. ವನ್ಯಜೀವಿ ಚಿಕಿತ್ಸೆ ವೇಳೆ ಹುತಾತ್ಮರಾದ … Read more

ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ವೈದ್ಯಕೀಯ ವಿದ್ಯಾರ್ಥಿ ಪ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆತಾಂಡದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇರಾನ್ ಸಂಘರ್ಷದಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ?

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧ ಕೊನೆಗೊಳಿಸಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಪಾಕಿಸ್ತಾನದ ಮೂಲಕ ಇರಾನ್ ಜೊತೆ ಮಾತುಕತೆ ನಡೆಸಲು ಅಮೆರಿಕ ಮುಂದಾಗಿದೆ. ಈ ವಾರದಲ್ಲೇ ಅಮೆರಿಕ ಮತ್ತು ಇರಾನ್ ಹಿರಿಯ ಅಧಿಕಾರಿಗಳ ಮಧ್ಯೆ ಪಾಕಿಸ್ತಾನದಲ್ಲಿ ಮಾತುಕತೆ ನಡೆಯಲಿದೆ ಎಂದು ಇಸ್ರೇಲ್ ಮೂಲ ಉಲ್ಲೇಖಿಸಿ ಮಾಧ್ಯಮ ಸುದ್ದಿ ಪ್ರಕಟಿಸಿದೆ. ಮಾತುಕತೆಗಳು ಕಾರ್ಯರೂಪಕ್ಕೆ ಬಂದರೆ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅಮೆರಿಕದ ಪರವಾಗಿ ಹಾಜರಾಗುವ ಸಾಧ್ಯತೆಯಿದೆ. ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್ ಪಶ್ಚಿಮ … Read more

ಮಿಲಿಟರಿ ವಿಮಾನ ಪತನ: 66 ಜನರು ಸಾವು

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಟೇಕಾಫ್ ಆದ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ. ನಗರ ಕೇಂದ್ರದಿAದ ಕೇವಲ 3 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಸ್ಥಳಾಂತರಿಸಲು ಪ್ರಯತ್ನಗಳು … Read more