ಕೈ ವಿರುದ್ಧ ಬಂಡಾಯ: 23 ಮುಸ್ಲಿಂ ಮುಖಂಡರ ನಾಮಪತ್ರ

ದಾವಣಗೆರೆ: ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಂ ನಾಯಕರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಂ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ಗೆ ಟಿಕೆಟ್ ನೀಡಿತ್ತು. ಇದನ್ನು ವಿರೋಧಿಸಿ … Read more

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಮಂಡ್ಯ: ಈಜಾಡಲು ಹೋಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ (15) ಮೃತ ಬಾಲಕ. ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಶಾಲೆಗೆ ರಜೆ ಇದ್ದ ಕಾರಣ ತನ್ನ 4 ಮಂದಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ. ಭಾನುವಾರ ಸಂಜೆಯವರೆಗೂ ಮನೆಗೆ ಬಾಲಕ ಹಿಂದಿರುಗಿರಲಿಲ್ಲ. ಪೋಷಕರು ಬಾಲಕನ ಪತ್ತೆಗಾಗಿ ಶೋಧ ನಡೆಸಿದ್ದರು. ನಂದೀಪುರ … Read more

ಸಮರ್ಥ್ ಗೆ ಸಿಎಂ, ಡಿಸಿಎಂ ಸಾಥ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಸೋಮವಾರ ನಾಮಪತ್ರ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ತಂದೆ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ತಾಯಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಾಥ್ ನೀಡಿದರು. ದುರ್ಗಾಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಬಳಿಕ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬಂದಿಳಿದರು. ಬಳಿಕ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಯಿತು. ಬಳಿಕ ಮಾತನಾಡಿದ … Read more

ಮುಸ್ಲಿಮರಿಗೆ ನಿಗಮ-ಮಂಡಳಿ, ಪರಿಷತ್ ಸ್ಥಾನ: ಡಿಕೆಶಿ ಭರವಸೆ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಮಾನದಂಡ ಆಧರಿಸಿ ಸಮರ್ಥ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮುಸ್ಲಿಂ ಸಮುದಾಯದ ಮುಖಂಡರಿಗೆ ವಿಧಾನ ಪರಿಷತ್ ಹಾಗೂ ನಿಗಮ, ಮಂಡಳಿ ನೇಮಕಾತಿಯಲ್ಲಿ ಒತ್ತು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಮುನ್ನ ನಡೆದ ಸಮೀಕ್ಷೆಯಲ್ಲಿ ಸಮರ್ಥ ಶಾಮನೂರು ಪರವಾದ ಒಲವು ವ್ಯಕ್ತವಾಗಿದೆ. ಎಲ್ಲ ರೀತಿಯ ಲೆಕ್ಕಾಚಾರ ಹಾಕಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಶಾಮನೂರು … Read more

ಬಿಜೆಪಿ ಅಭ್ಯರ್ಥಿ ನಾಮಪತ್ರ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ಮೆರವಣಿಗೆ ಮಾಡಲಾಯಿತು. ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ, ಈ ಸಲ ದಾವಣಗೆರೆ ದಕ್ಷಿಣ ಕ್ಷೇತ್ರದ ಬದಲಾವಣೆ ಖಚಿತ ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಮೇಟಿ, ಬಿಜೆಪಿಯ ಚರಂತಿಮಠ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಸೋಮವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ತಿಮ್ಮಾಪುರದಲ್ಲಿರುವ ತಮ್ಮ ತಂದೆ, ದಿ. ಎಚ್.ವೈ.ಮೇಟಿ ಸಮಾಧಿಗೆ ಪೂಜೆ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ … Read more

ಡಿವೈಡರ್‌ಗೆ ಬಸ್ ಡಿಕ್ಕಿ: ನಾಲ್ವರು ಪ್ರಯಾಣಿಕರು ಸಾವು

ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೇರಳ ಮೂಲದ ಪಿ.ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರ ಪೈಕಿ ಇಬ್ಬರು … Read more

ಮತ್ತೆ ಹುಲಿ ಪ್ರತ್ಯಕ್ಷ

ಚಾಮರಾಜನಗರ: ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದೆ. ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಿದ್ದಾರೆ. ಬಂದೂಕು ಸಮೇತ ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತೀಚೆಗೆ ಹಂದಿ ಕೊಂದಿತ್ತು. ಮೊನ್ನೆ ಇದೇ ಗ್ರಾಮದಲ್ಲಿ ಕುರಿಗಳನ್ನು ಬಲಿ ಪಡೆದಿದೆ. ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಅಕ್ರಮ ಮದ್ಯ ದಂಧೆ ತಡೆಗೆ ಹೊಸ ಕಾಯ್ದೆ ಜಾರಿ: ತಿಮ್ಮಾಪುರ

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಅಕ್ರಮವಾಗಿ ಮದ್ಯ ತಯಾರಿಕೆ ದಂಧೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನು ಪರಿಷ್ಕರಿಸಿ ಹೊಸ ಕಾಯ್ದೆ ತರುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು. ಈ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಅವರು ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ … Read more

ನೀರಾವರಿ ಯೋಜನೆಗಳ ಜಾರಿಗೆ ಸಂಸದರ ಜೊತೆ ಚರ್ಚೆ: ಡಿಕೆಶಿ

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರೊಂದಿಗೆ ನಾನು ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ನವದೆಹಲಿಗೆ ತೆರಳುವ ಮುನ್ನ ಮಂಗಳವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರೂ ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ … Read more