ಶಿಕ್ಷಕಿಯರಿಗೆ ಮಾತೃತ್ವ ರಜೆ ನಂತರ 5 ವರ್ಷ ಇಚ್ಚಿಸುವ ಶಾಲೆಗೆ ವರ್ಗ

ಬೆಂಗಳೂರು: ಮಾತೃತ್ವ ರಜೆ ನಂತರ (ಹೆರಿಗೆ ರಜೆ) ಕರ್ತವ್ಯಕ್ಕೆ ಮರಳುವ ಶಿಕ್ಷಕಿಯರಿಗೆ ಐದು ವರ್ಷ ಅವರು ಇಚ್ಚಿಸುವ ಶಾಲೆಗಳಿಗೆ ನಿಯುಕ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ವೈ.ಎಂ.ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಗುವಿನ ವಯಸ್ಸು ಐದು ವರ್ಷ ಪೂರ್ಣಗೊಳ್ಳುವವರೆಗೆ ಅವರ ಲಾಲನೆಪಾಲನೆಗೆ ಹೆಚ್ಚಿನ ಸಮಯ ಬೇಕಾಗುತ್ತದೆ. ಶಿಕ್ಷಕಿಯರು ಮತ್ತು ಮಕ್ಕಳ ಆರೈಕೆ, ಪೋಷಣೆ ಗಮನದಲ್ಲಿಟ್ಟುಕೊಂಡು ಇಂತಹ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಮಹಿಳಾ ಸರ್ಕಾರಿ ನೌಕರರಿಗೆ … Read more

ಹೋಟೆಲ್‌ ಗಳಿಗೆ ಸಿಲಿಂಡರ್ ಪೂರೈಕೆ ಸದ್ಯಕ್ಕಿಲ್ಲ ಗ್ಯಾಸ್ ಪೂರೈಕೆ ಪರಿಸ್ಥಿತಿ ಗಂಭೀರ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗ್ಯಾಸ್ ಕೊರತೆಯಿಂದ ತತ್ತರಿಸಿರುವ ಹೋಟೆಲ್ ಉದ್ಯಮಕ್ಕೆ ಸರ್ಕಾರ ಮತ್ತೆ ಶಾಕ್ ನೀಡಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ತೈಲ ಪೂರೈಕೆ ಕಂಪನಿಗಳ ಜೊತೆ ಸೋಮವಾರ ಮಹತ್ವದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾಸ್ ಪೂರೈಕೆ ಪರಿಸ್ಥಿತಿ ಗಂಭೀರವಾಗಿದೆ. ಕೇಂದ್ರ ಸರ್ಕಾರ ಹೆಚ್ಚಿನ ಗಮನ ಕೊಡಬೇಕು. ಇಂದು ಇಂಧನ ಇಲಾಖೆ ಕಾರ್ಯದರ್ಶಿ, ಕಮಿಷನರ್ ಹಾಗೂ ತೈಲ ಕಂಪನಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಯಿತು. ಒಂದು ಗಂಟೆಯ ತನಕ ಸಭೆಯಾಗಿದೆ. … Read more

ಭಾರತಕ್ಕೆ 45,000 ಮೆ.ಟನ್ ಗ್ಯಾಸ್ ಹೊತ್ತುತಂದ ಹಡಗು

ಗಾಂಧಿನಗರ: ಇರಾಕ್ ಹಾರ್ಮುಜ್ ಜಲಸಂಧಿಯಿAದ ಬಿಡುಗಡೆಗೊಂಡಿದ್ದ ಶಿವಾಲಿಕ್ ಹಡಗು 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಂದರು ಸಚಿವಾಲಯ, ನಿರೀಕ್ಷೆಯಂತೆ ಮಾ.16ರಂದು ಶಿವಾಲಿಕ್ ಹಡಗು ಭಾರತಕ್ಕೆ ಬಂದು ತಲುಪಿದೆ ಎಂದು ತಿಳಿಸಿದೆ. ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ನಂದಾ ದೇವಿ ಮತ್ತು ಶಿವಾಲಿಕ್ ಎಂಬ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತಕ್ಕೆ ಬರುತ್ತಿವೆ. ಶಿವಾಲಿಕ್ ಮಾರ್ಚ್ 16ರಂದು ಮತ್ತು ನಂದಾ … Read more

ಸಂಸತ್ ನಲ್ಲೂ ಗ್ಯಾಸ್ ಸಮಸ್ಯೆ ಪ್ರತಿಧ್ವನಿ ಎಲ್‌ಪಿಜಿ ಕೊರತೆಗೆ ಮಲ್ಲಿಕಾರ್ಜುನ ಖರ್ಗೆ ಕಳವಳ: ಬಿಜೆಪಿ ತಿರುಗೇಟು

ನವದೆಹಲಿ: ದೇಶದಲ್ಲಿ ಎಲ್‌ಪಿಜಿ ಕೊರತೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಸಂಸತ್ ಅಧಿವೇಶನದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಯಲ್ಲಿ ಮಾರಾಟ ತಡೆಯಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರು, ವಿರೋಧ ಪಕ್ಷವು ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸರ್ಕಾರದೊಂದಿಗೆ ನಿಲ್ಲುವ ಬದಲು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ತಿರುಗೇಟು ನೀಡಿದರು. ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ … Read more

ಬೆಂಗಳೂರಿನಲ್ಲಿಯೇ ಐಪಿಎಲ್ ಕ್ರಿಕೆಟ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28ರಂದು ಉದ್ಘಾಟನಾ ಪಂದ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳನ್ನು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಹೀಗಾಗಿ ಕ್ರಿಕೆಟ್ ಪಂದ್ಯಕ್ಕೆ ಇದ್ದ ಅಡೆತಡೆಗಳೆಲ್ಲಾ ದೂರವಾಗಿವೆ. ವಿಶ್ವದ ಅತಿದೊಡ್ಡ ಟಿ20 ಲೀಗ್‌ನ 19ನೇ ಆವೃತ್ತಿಯು ಮಾರ್ಚ್ 28ರಂದು ಆರಂಭವಾಗಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ವೇಳಾಪಟ್ಟಿ ಪ್ರಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ … Read more

ಅಭಿವೃದ್ಧಿ ಮೂಲಕವೇ ವಿಪಕ್ಷಗಳ ಟೀಕೆಗೆ ಉತ್ತರ: ಸಚಿವ ಪರಮೇಶ್ವರ್

ಕೊರಟಗೆರೆ: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿಯಿAದ ಅಭಿವೃದ್ಧಿಗೆ ಹಣವಿಲ್ಲ ಎಂಬ ವಿಪಕ್ಷಗಳ ಆರೋಪ ಸುಳ್ಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಹೇಳಿದರು. ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದಲ್ಲಿ ಹಣವೇ ಇಲ್ಲದಿದ್ದರೆ ಕೊರಟಗೆರೆ ಕ್ಷೇತ್ರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ತರಲು ಸಾಧ್ಯವಾಗುತ್ತಿತ್ತೆ? ಒಂದು ಬಜೆಟ್ ಅವಧಿಯಲ್ಲೇ ಸುಮಾರು 218 ಕೋಟಿ ಅನುದಾನವನ್ನು ಕೊರಟಗೆರೆ ಕ್ಷೇತ್ರಕ್ಕೆ ತರಲಾಗಿದೆ. ಟೀಕೆ ಮಾಡುವವರಿಗೆ ಅಭಿವೃದ್ಧಿ ಕೆಲಸಗಳ ಮೂಲಕವೇ ಉತ್ತರ ನೀಡುತ್ತೇವೆ ಎಂದು … Read more

ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಮತ್ತೆ ಆರಂಭ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದಲ್ಲಿ ಗ್ಯಾಸ್ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ದಾಸೋಹವನ್ನು ಪುನಾರಂಭ ಮಾಡಲಾಗಿದೆ. ಗ್ಯಾಸ್ ಸಿಲಿಂಡರ್ ಕೊರತೆ ಕಾರಣದಿಂದ ಒಂದು ದಿನದ ಮಟ್ಟಿಗೆ ದಾಸೋಹ ಸ್ಥಗಿತಗೊಂಡಿತ್ತು. ಸಮಸ್ಯೆಗೆ ಗ್ಯಾಸ್ ಏಜೆನ್ಸಿಗಳು ಸ್ಪಂದಿಸಿದ್ದರಿAದ, ದೇವಾಲಯಕ್ಕೆ ಅಗತ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಾಗಿದೆ. ಬಿಳಿಗಿರಿರಂಗನ ಸನ್ನಿಧಿಯಲ್ಲಿ ದಾಸೋಹ ಮತ್ತೆ ಪುನರಾರಂಭಗೊAಡಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

ಅಮರೇಶಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

  ಅಮರೇಶ ನುಗಡೋಣಿ ಅವರ ದಡ ಸೇರಿಸು ತಂದೆ ಕಥಾ ಸಂಕಲನಕ್ಕೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಪ್ರತಿಷ್ಠಿತ ಪ್ರಶಸ್ತಿ 1 ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಜಯಲಲಿತ ಮತ್ತು ಸಹನಾ ಕಾಂತಬೈಲು ಅವರು ಆಯ್ಕೆ ಸಮಿತಿಯಲ್ಲಿ ಇದ್ದರು. ವಿಶೇಷ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಯುಗಾದಿ ಸಂಗೀತೋತ್ಸವ

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಮಾರ್ಚ್ 19ರಂದು ಸಂಜೆ 5:30ಕ್ಕೆ ಅರಮನೆ ಆವರಣದಲ್ಲಿ ಯುಗಾದಿ ಸಂಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿಕುಮಾರಸ್ವಾಮಿ, ಸಚಿವರಾದ ಎಚ್.ಸಿ.ಮಹದೇವಪ್ಪ ಭಾಗವಹಿಸುವರು ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸುವರು.

ಗ್ರಾಮೀಣ ಪ್ರದೇಶಕ್ಕೆ ಇನ್ಮುಂದೆ 45 ದಿನಕ್ಕೆ ಒಂದು ಸಿಲಿಂಡರ್

ನವದೆಹಲಿ: ದೇಶದ ಗ್ರಾಮೀಣ ಜನರಿಗೆ ಮತ್ತೆ ಅಡುಗೆಗೆ ಸೀಮೆಎಣ್ಣೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅಲ್ಲದೆ, ಗ್ರಾಮೀಣ ಪ್ರದೇಶದ ಜನರಿಗೆ 45 ದಿನಕ್ಕೆ ಒಂದು ಸಿಲಿಂಡರ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಗಳಿಗೆ ಕೇಂದ್ರ ಸರ್ಕಾರ 1 ಲಕ್ಷ ಕಿಲೋಲೀಟರ್ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಪಡಿತರ ಅಂಗಡಿಗಳ ಮೂಲಕ ಸೀಮೆಎಣ್ಣೆಯನ್ನು ವಿತರಿಸಲಾಗುತ್ತದೆ. ಹೋಟೆಲ್, ರೆಸ್ಟೋರೆಂಟ್‌ಗಳು ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು ಒಂದು … Read more