
ಹಾಸನ: 40 ವರ್ಷವಾದ್ರೂ ನನಗಿನ್ನೂ ಮದುವೆ ಮಾಡಿಸಿಲ್ಲ ಎಂದು ಜಗಳ ತೆಗೆದ ಮಗ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ. ಉಮಾಶಂಕರ್ (40) ತಾಯಿಯನ್ನ ಕೊಂದ ಪುತ್ರ.
ಕಳೆದ ವರ್ಷ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ನಡೆದ ಅಪಘಾತದಲ್ಲಿ ಆರೋಪಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದಿತ್ತು. ಇದರಿಂದ ಒಮ್ಮೊಮ್ಮೆ ಬುದ್ದಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದ ಎನ್ನಲಾಗಿದೆ. ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ ಜಗಳವಾಡುತ್ತಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಮೊದಲು ಕೈನಿಂದ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ಆಕೆ ಕುಸಿದು ಬಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಗಂಗಮ್ಮ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


