
ಮಂಡ್ಯ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಪವನ್ (27) ಅನುಮಾನಸ್ಪದ ಸಾವನ್ನಪ್ಪಿರುವ ಪ್ರಥಮ ದರ್ಜೆ ಗುತ್ತಿಗೆದಾರ. ಪವನ್ ಕೋಟ್ಯಂತರ ರೂ. ಮೌಲ್ಯದ ಎಲೆಕ್ಟ್ರಿಕ್ ಕಾಮಗಾರಿ ನಡೆಸುತ್ತಿದ್ದರು. ಏ.2ರಂದು ಮನೆಯಿಂದ ಕೆಲಸದ ಸ್ಥಳಕ್ಕೆ ಹೋಗುತ್ತೇನೆ ಎಂದು ತೆರಳಿದ್ದ ಪವನ್ ಮನೆಗೆ ವಾಪಸ್ ಬಂದಿರಲಿಲ್ಲ.
ನಾಪತ್ತೆ ಬಳಿಕ ಪವನ್ ಫೋನ್ ಸ್ಪೀಚ್ ಆಫ್ ಆಗಿತ್ತು. ಸಾಮಾಜಿಕ ಜಾಲತಾಣದ ಖಾತೆಗಳು ಡಿ ಆಕ್ಟೀವ್ ಆಗಿದ್ದವು. ಬಳಿಕ ಮನೆಯವರು ಹಾಗೂ ಸ್ನೇಹಿತರು ಪವನ್ಗಾಗಿ ಹುಡುಕಾಟ ನಡೆಸಿದ್ದರು. ನಂತರ ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಪವನ್ ಮೃತದೇಹ ಅನುಮಾನಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಸಾವಿನ ಬಗ್ಗೆ ಕುಟುಂಬಸ್ಥರು ಹಾಗೂ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ. ಪವನ್ನನ್ನು ಕೊಲೆ ಮಾಡಿ ಬಳಿಕ ನದಿಗೆ ಎಸೆಯಲಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗುತ್ತಿಗೆದಾರ ಶವವಾಗಿ ಪತ್ತೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


