
ಬೆಂಗಳೂರು: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 9ರಂದು (ಗುರುವಾರ) ಬೆಳಗ್ಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಇಂದು ಮಂಗಳವಾರ ಫಲಿತಾಂಶ ಪ್ರಕಟವಾಗಬೇಕಿತ್ತು. ಕಾರಣವೇ ಇಲ್ಲದೇ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಣೆ ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆ. ಏಪ್ರಿಲ್ 9ರ ಬೆಳಗ್ಗೆ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತರ ಇಲಾಖೆ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೂ ಪಿಯುಸಿ ಪರೀಕ್ಷೆ ನಡೆದಿತ್ತು. ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಫಲಿತಾಂಶ ವೆಬ್ ಸೈಟ್: karresults.nic.in
ನಾಳೆ ದ್ವಿತೀಯ ಪಿಯು ಫಲಿತಾಂಶ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


