ಟೆಹರಾನ್: ಯುದ್ಧದಲ್ಲಿ ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ಸ್ವಯಂಪ್ರೇರಿತರಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಘೋಷಿಸಿದ್ದಾರೆ.
ಹಾರ್ಮುಜ್ ಜಲಸಂಧಿಯ ಮೇಲಿನ ನಿರ್ಬಂಧ ತೆರವುಗೊಳಿಸದಿದ್ದರೆ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆಗೆ ಮಸೌದ್ ಪೆಜೆಶ್ಕಿಯಾನ್ ತಿರುಗೇಟು ನೀಡಿದ್ದಾರೆ. 14 ಮಿಲಿಯನ್ಗಿಂತಲೂ ಹೆಚ್ಚು ಇರಾನಿನ ಜನರು ತಮ್ಮ ಪ್ರಾಣವನ್ನು ತ್ಯಾಗಮಾಡಲು ಸಿದ್ಧರಿದ್ದಾರೆ. ನಾನು ಕೂಡ ಇರಾನ್ಗಾಗಿ ನನ್ನ ಪ್ರಾಣ ತ್ಯಾಗಕ್ಕೆ ಸಿದ್ಧ ಎಂದು ಹೇಳಿದ್ದಾರೆ.
ಪ್ರಾಣ ತ್ಯಾಗಕ್ಕೂ ಸಿದ್ಧ: ಇರಾನ್ ಅಧ್ಯಕ್ಷ ತಿರುಗೇಟು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


