ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ಮಂಗಳವಾರ ದೂರು ನೀಡಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗ ಉಪ ಪೊಲೀಸ್ ಆಯುಕ್ತರು ಹಾಗೂ ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿರುವ ಮಹಿಳಾ ಆಯೋಗ ಕ್ರಮಕ್ಕೆ ಸೂಚಿಸಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನ್ನ ಖಾಸಗಿ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬ್ಲಾಕ್ಮೇಲ್ ಮಾಡುತ್ತಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದಾರೆ. ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂತ್ರೆಸ್ತೆ ಮನವಿ ಸಲ್ಲಿಸಿದ್ದಾರೆ ಎಂದು ಮಹಿಳಾ ಆಯೋಗದ ಪತ್ರದಲ್ಲಿ ಉಲ್ಲೇಖಿಸಿದೆ. ಈ ಪ್ರಕರಣವನ್ನು ಪರಿಶೀಲಿಸಿ, ಸಂತ್ರೆಸ್ತೆಗೆ ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದೆ.
ಸ್ವಾಮೀಜಿ ವಿರುದ್ಧ ಮಹಿಳೆ ದೂರು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


