--ಇಲ್ಲಿ ಜಾಹೀರಾತು--

ಕದನ ವಿರಾಮ ಬೆನ್ನಲ್ಲೇ ಕಚ್ಚಾತೈಲ ಬೆಲೆ ಭಾರೀ ಕುಸಿತ

On: April 8, 2026 2:24 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಲಂಡನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 14 ದಿನಗಳ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಕುಸಿತವಾಗಿದೆ. ಒಂದೇ ದಿನ ಸುಮಾರು ಶೇ.13 ರಿಂದ 17ರಷ್ಟು ಕುಸಿದಿದೆ. ಕಳೆದ ಆರು ವರ್ಷಗಳಲ್ಲೇ ಒಂದೇ ದಿನ ಕಂಡ ಅತಿ ದೊಡ್ಡ ಕುಸಿತ ಇದಾಗಿದೆ.
ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾತೈಲದ ಬೆಲೆ ಸುಮಾರು 16.13 ಡಾಲರ್ (14.3%) ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 96.82 ಡಾಲರ್ (8,940 ರೂ.) ತಲುಪಿದೆ. ಜಾಗತಿಕ ಮಾನದಂಡವಾದ ಒಪೆಕ್ ದೇಶಗಳ ಬ್ರೆಂಟ್ ಕಚ್ಚಾತೈಲದ ದರ 14.84 ಡಾಲರ್ (13.6%) ಕುಸಿದು ಪ್ರತಿ ಬ್ಯಾರೆಲ್‌ಗೆ 94.43 ಡಾಲರ್‌ಗೆ (8,720 ರೂ.) ಇಳಿಕೆಯಾಗಿದೆ
ಈ ಘೋಷಣೆಗೂ ಮುನ್ನ ಯುದ್ಧದ ಭೀತಿಯಿಂದಾಗಿ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 117ರಿಂದ 120 ಡಾಲರ್‌ವರೆಗೂ (11 ಸಾವಿರ ರೂ.ವರೆಗೆ) ಏರಿಕೆಯಾಗಿತ್ತು. ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಮುಕ್ತಗೊಳಿಸಲು ಇರಾನ್ ಒಪ್ಪಿಗೆ ನೀಡಿದ್ದರಿಂದ ಮಾರುಕಟ್ಟೆಯಲ್ಲಿ ಆತಂಕವನ್ನು ಕಡಿಮೆ ಮಾಡಿದೆ. ಜಗತ್ತಿನ ಸುಮಾರು ಶೇ.20ರಷ್ಟು ತೈಲ ಪೂರೈಕೆ ಈ ಮಾರ್ಗದ ಮೂಲಕವೇ ನಡೆಯುವುದರಿಂದ ಪೂರೈಕೆ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಲೆ ಇಳಿದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now