--ಇಲ್ಲಿ ಜಾಹೀರಾತು--

ಅರಣ್ಯ ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ: ಸಚಿವ ಖಂಡ್ರೆ ಆದೇಶ

On: April 17, 2026 2:51 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.
ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಂದು ಸಲಕ್ಕೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದು ಹೇಳಿದರು.
ಚಾರಣಕ್ಕೆ ಬರುವವರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು. ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದರು.
ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆಯುವಂತಾಗಿತ್ತು. ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾದ ಬಾಲಕಿ ಶವವಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಗಾಗಿ ಈ ಎಸ್.ಒ.ಪಿ. ರೂಪಿಸಲು ಸೂಚಿಸಿದ್ದಾಗಿ ಅವರು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now