--ಇಲ್ಲಿ ಜಾಹೀರಾತು--

ಹೈಕಮಾಂಡ್ ಸೂಚನೆಯಂತೆ ಕ್ರಮ ಮುಸ್ಲಿಂ ನಾಯಕರ ‘ತಲೆದಂಡ’ದ ಬಗ್ಗೆ ಡಿಕೆಶಿ ಸ್ಪಷ್ಟನೆ

On: April 17, 2026 2:54 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರಲ್ಲಿ ನನ್ನ ವೈಯಕ್ತಿಕ ವಿಚಾರವಿಲ್ಲ ಎಂದು ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡಿರುವ ಕ್ರಮವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಶುಕ್ರವಾರ ಮಾತನಾಡಿದ ಡಿಕೆಶಿ, ಇದರಲ್ಲಿ ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಎಲ್ಲವೂ ಪಕ್ಷದ ನಿರ್ಧಾರ. ಪಕ್ಷಕ್ಕೆ ತನ್ನದೇ ಆದ ವರದಿ ಇದೆ. ದೆಹಲಿ ನಾಯಕರ ಸೂಚನೆ, ಸಲಹೆ ಮೇರೆಗೆ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಮಾರ್ಗದರ್ಶನ ಮಾಡಬೇಕಾಗುತ್ತದೆ ಎಂದು ಹೇಳಿದರು.
ಎಲ್ಲರೂ ನನ್ನ ಮೇಲೆಯೇ ಹೇಳಬಹುದು. ಆದರೆ, ಹೇಳಿದರೂ ಚಿಂತೆ ಇಲ್ಲ ನನಗೆ. ಪಕ್ಷದ ಶಿಸ್ತಲ್ಲಿ ನಾವು ಕೆಲಸ ಮಾಡಬೇಕಾಗುತ್ತದೆ. ನಮ್ಮ ಪಕ್ಷ ಇರೋದೇ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ, ಅಹಿಂದ ಸಮುದಾಯದ ಪರ. ಎಲ್ಲಾ ವರ್ಗಕ್ಕೆ ನ್ಯಾಯ ಕೋಡೋಕೆ ಇರೋದೇ ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now