
ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆಯೂ ಏ.21ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.20ರವರೆಗೆ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏ.21ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಬಹುದು. ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ರಾಜ್ಯದಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಸಾಮಾನ್ಯಕ್ಕಿಂತ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ 36ರಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲು ನೆತ್ತಿ ಸುಡುವಂತಾಗಿದೆ. ಏಪ್ರಿಲ್‌ನಲ್ಲಿ ಅತಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಮುಂದಿನ ತಿಂಗಳು ಇನ್ನಷ್ಟು ಬಿಸಿಲಿನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ.







