--ಇಲ್ಲಿ ಜಾಹೀರಾತು--

ಹೊಸ ಜನಗಣತಿ ನಂತರವೇ ಕ್ಷೇತ್ರ ಮರುವಿಂಗಡಣೆ ಸೂಕ್ತ ಇದೇ ಕಾರಣಕ್ಕೆ ಕಾಂಗ್ರೆಸ್ ವಿರೋಧ: ಸಿದ್ದರಾಮಯ್ಯ ಅಭಿಪ್ರಾಯ

On: April 20, 2026 2:30 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮೈಸೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ಹೊಸ ಜನಗಣತಿ ನಡೆದ ನಂತರವೇ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕಾರಣಕ್ಕಾಗಿಯೇ ನಾವು ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದ್ದೆವು. ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿ ಪರವಾಗಿಯೇ ಇದೆ ಎಂದು ತಿಳಿಸಿದರು.
ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಮಹಿಳಾ ಮೀಸಲಾತಿ ತಂದಿರುವುದು ಕೂಡ ಕಾಂಗ್ರೆಸ್. 2023ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಆಗಲೇ ಅದನ್ನು ಜಾರಿ ಮಾಡಬೇಕಿತ್ತು. ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಈಗಲೂ 2023ರ ಪ್ರಕಾರವೇ ಮೀಸಲಾತಿ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡಣೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ. ಲೋಕಸಭಾ ಸ್ಥಾನಗಳನ್ನು ಶೇ.50ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದು ಆಗ್ರಹಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now