--ಇಲ್ಲಿ ಜಾಹೀರಾತು--

ಕೈ ನಾಯಕರ ಗುರಿಯಾಗಿಸಿ ಇಡಿ ದಾಳಿ: ಸಿದ್ದರಾಮಯ್ಯ

On: April 21, 2026 2:59 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಗುಂಡ್ಲುಪೇಟೆ: ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇ.ಡಿ ದಾಳಿ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 110 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಲು ಮಂಗಳವಾರ ಆಗಮಿಸಿದ ವೇಳೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಿಎಂ, ಬಿಜೆಪಿ ನಾಯಕರ ನಾಯಕರ ಮೇಲೆ ಇಡಿ ದಾಳಿ ನಡೆಸುವುದಿಲ್ಲ ಏಕೆ ಎಂದು ಪ್ರಶ್ನಿಸಿದರು.
ಅಂದು ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಯಕ್ರಮಗಳನ್ನು ವಿರೋಧ ಮಾಡಿದ್ದ ಬಿಜೆಪಿ ಇಂದು ಚುನಾವಣೆ ಗೆಲ್ಲಲು ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ. ಗ್ಯಾರಂಟಿ ಯೋಜನೆಗಳ ಮಹತ್ವ ಬಿಜೆಪಿಗೆ ಅರಿವಾದಂತಿದೆ ಎಂದು ವ್ಯಂಗ್ಯವಾಡಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂವಿಧಾನದ 73, 74ನೇ ಕಲಂಗೆ ತಿದ್ದುಪಡಿ ತಂದು ರಾಜ್ಯಸಭೆಯಲ್ಲಿ ಜಾರಿಗೊಳಿಸಲು ಮುಂದಾದಾಗ ಎನ್‌ಡಿಎ ಮೈತ್ರಿಕೂಟ ಅಡ್ಡಿಪಡಿಸಿತ್ತು. ಬಿಜೆಪಿ ನಿಜವಾದ ಮಹಿಳಾ ಮೀಸಲಾತಿ ವಿರೋಧಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಸಂಸತ್ತಿನಲ್ಲಿ ಡಿಲಿಮಿಟೇಷನ್ ಮಸೂದೆಯ ಜೊತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಒಟ್ಟುಗೂಡಿಸಿ ಮಂಡಿಸಲು ಮುಂದಾಗಿದ್ದರಿAದ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿತು. ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದು ಸಮಜಾಯಿಷಿ ನೀಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಮಾಡುವಾಗ ಅಲ್ಪಸಂಖ್ಯಾತ ಮುಖಂಡರನ್ನು ಕಡೆಗಣಿಸಿಲ್ಲ. ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now