
ಪಿರಿಯಾಪಟ್ಟಣ: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಹೋರಾಟಕ್ಕೆ ಜಯ ಸಿಕ್ಕಿದೆ. ಹತ್ತು ದಿನದೊಳಗೆ ಕೇಂದ್ರಕ್ಕೆ ಯೋಜನೆಯ ಡಿಪಿಆರ್ ಸಲ್ಲಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಪಿರಿಯಾಪಟ್ಟಣದಲ್ಲಿ ಮಂಗಳವಾರ 419 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೇಕೆದಾಟು ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಶಕ್ತಿ ಇದ್ದರೆ ಯೋಜನೆ ಅನುಷ್ಠಾನಕ್ಕೆ ಸಹಕರಿಸಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಙನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂ ದಾಖಲೆಗಳನ್ನು ಕಂದಾಯ ಇಲಾಖೆಯಿಂದ ಒದಗಿಸುವ ಕೆಲಸ ಮಾಡುತ್ತಿದೆ. 1.11 ಕೋಟಿ ಜನರಿಗೆ ಅವರ ಭೂದಾಖಲೆಗಳನ್ನು ಒದಗಿಸಲಾಗಿದೆ. ಇಂತಹ ಕಾರ್ಯಕ್ರಮವನ್ನು ಬಿಜೆಪಿ-ಜೆಡಿಎಸ್ ಮಾಡಿಲ್ಲ. ತಮಿಳುನಾಡಿನಲ್ಲೂ ಮಹಿಳೆಯರಿಗೆ 2 ಸಾವಿರ ಘೋಷಣೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿ ಆಗಿದೆ ಎಂದು ಹೇಳಿದರು.
ಮೇಕೆದಾಟುಗೆ ಡಿಪಿಆರ್: ಡಿಕೆಶಿ






