--ಇಲ್ಲಿ ಜಾಹೀರಾತು--

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 45 ಪ್ರಯಾಣಿಕರು ಪಾರು

On: April 28, 2026 2:38 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಸಮೀಪ ಮಂಗಳವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹೆಗ್ಗರೆ ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಹೆಗ್ಗರೆ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಬಸ್ ನಲ್ಲಿ 45 ಪ್ರಯಾಣಿಕರಿದ್ದರು. ಇವರಲ್ಲಿ 15 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನಿಗೆ ಮುಂಜಾನೆ ವೇಳೆ ನಿದ್ದೆಯ ಮಂಪರು ಆವರಿಸಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now