--ಇಲ್ಲಿ ಜಾಹೀರಾತು--

ಕಾರು ನಾಲೆಗೆ ಬಿದ್ದು ತಾಯಿ, ಮಗು ಸಾವು

On: April 29, 2026 2:20 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಹಾಸನ: ಸ್ವಿಫ್ಟ್ ಕಾರು ನಾಲೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಪ್ರಿಯಾಂಕ (30), ಮಗು ವೈಭವ್ (ಒಂದೂವರೆ ವರ್ಷ) ಎಂದು ಗುರುತಿಸಲಾಗಿದೆ. ಬೆಂಗಳೂರಿನ ದೇವನಹಳ್ಳಿ ನಿವಾಸಿಗಳಾದ ಮಂಜುನಾಥ್, ಪತ್ನಿ ಪ್ರಿಯಾಂಕ, ಪುತ್ರ ವೈಭವ್, ಸಂಬAಧಿಗಳಾದ ಚಂದನ್, ದಿಲೀಪ್, ದೇವರಾಜು ಅವರು ಸ್ವಿಫ್ಟ್ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕಾರು ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರನ್ನು ನಾಲೆಯಿಂದ ಮೇಲೆತ್ತಲಾಗಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now