--ಇಲ್ಲಿ ಜಾಹೀರಾತು--

ಬಾಲಗರ್ಭಿಣಿಯರ ಸ್ಕ್ಯಾನಿಂಗ್: ಮೂವರು ವೈದ್ಯರ ಬಂಧನ

On: April 29, 2026 2:15 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಡ್ಯ: ಭ್ರೂಣಲಿಂಗ ಪತ್ತೆಗಾಗಿ 31 ಬಾಲಗರ್ಭಿಣಿಯರಿಗೆ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪದಡಿ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ಡಾ.ಹರ್ಷಿತ್ ಮತ್ತು ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ.ಹರೀಶ್ ಬಂಧಿತ ವೈದ್ಯರು. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ತಲೆಮರೆಸಿ ಕೊಂಡಿದ್ದಾರೆ. ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಪಟ್ಟಣ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಒಟ್ಟು 17 ಆರೋಪಿಗಳ ವಿರುದ್ಧ 12 ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಸರ್ಕಾರಿ ವೈದ್ಯೆ, ಮೂವರು ಖಾಸಗಿ ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲೂ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಪಟ್ಟಣದ ಎರಡು ಡಯಾಗ್ನಸ್ಟಿಕ್ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿರುವುದನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಪತ್ತೆ ಮಾಡಿದ್ದರು. ನಾವಿ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ 2024ನೇ ಸಾಲಿನಲ್ಲಿ 19 ಮತ್ತು 2025ನೇ ಸಾಲಿನಲ್ಲಿ 5 ಸೇರಿದಂತೆ ಒಟ್ಟು 24 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಲಾಗಿದೆ. ಕುಶಾಲ್ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲೂ 7 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿರುವ ಆರೋಪವಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now