--ಇಲ್ಲಿ ಜಾಹೀರಾತು--

ಕೊಡಲಿಯಿಂದ ಕೊಚ್ಚಿ ಪತ್ನಿ ಕೊಲೆ

On: April 30, 2026 2:58 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮೈಸೂರು: ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಪತಿ ಬಳಿಕ ಪೊಲೀಸರಿಗೆ ಶರಣಾದ ಭೀಕರ ಘಟನೆ ನಗರದ ಹಳೆ ಕೆಸರೆಯಲ್ಲಿ ನಡೆದಿದೆ.
ಆರೋಪಿ ಮಹೇಶ್ ತನ್ನ ಪತ್ನಿ ಪುಷ್ಪ (24) ಪ್ರತಿ ದಿನ ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಕೊಡಲಿಯಿಂದ ಹೊಡೆದು, ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ದೇವರಾಜ ಅರಸು ರಸ್ತೆಯ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಪುಷ್ಪ ಕೆಲಸ ಮಾಡುತ್ತಿದ್ದರು. ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ಈ ವಿಚಾರಕ್ಕೆ ಪುಷ್ಪ ಮತ್ತು ಮಹೇಶ್ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಹೆಂಡತಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಮಹೇಶ್ ಆಕೆಯ ಮೇಲೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.
ಎಂದಿನಂತೆ ಪುಷ್ಪ ಕೆಲಸ ಮುಗಿಸಿ ಮನೆಗೆ ತಡವಾಗಿ ಬಂದಾಗ ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ತಲೆಗೆ ಜೋರಾಗಿ ಹೊಡೆದಿದ್ದಾನೆ. ಪುಷ್ಪ ಕೆಳಗೆ ಬಿದ್ದ ನಂತರ, ದಿಂಬಿನಿಂದ ಆಕೆಯ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಪತ್ನಿಯನ್ನು ಕೊಂದ ನಂತರ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now