--ಇಲ್ಲಿ ಜಾಹೀರಾತು--

‘ಜನಿವಾರ್’ ಸಂತ್ರಸ್ತರಿಗೆ ಸಿಇಟಿ ಮರು ಪರೀಕ್ಷೆ

On: April 30, 2026 2:52 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಸಿಟಿಇ ಪರೀಕ್ಷೆ ವೇಳೆ ಜನಿವಾರ ವಿವಾದದಿಂದ ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.
ಜನಿವಾರ ಹಾಗೂ ಹಿಜಬ್‌ಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹೀಗಾಗಿ ತೊಂದರೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮಾತ್ರ ಅನ್ವಯ ಆಗುವಂತೆ ಮರುಪರೀಕ್ಷೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು.
ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ಕೊಡೋದು ಸಮಂಜಸ ಅಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ. ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡುವುದು ಸೂಕ್ತ ಅಂತ ನಿರ್ಧಾರ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now