
ಹಾಸನ: ಪ್ರೀವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವರ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ದರ್ಬಾರ್ ಪೇಟೆ ನಿವಾಸಿ ಮನು ಎಲ್.ಎನ್. (29) ಮೃತಪಟ್ಟ ವರ.
ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ಮೇ 10ರಂದು ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು. ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಗುರುವಾರ ಬೆಳಿಗ್ಗೆ ಮನು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರೀವೆಡ್ಡಿಂಗ್ ಫೋಟೋ ಶೂಟ್: ಕಾರು ಅಪಘಾತದಲ್ಲಿ ವರ ಸಾವು







