ಬಿಎಂಟಿಸಿ ಬಸ್ ಚಾಲಕನ ದುರ್ಮರಣ

ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಇಬ್ಬರ ಸಾವು, 7 ಮಂದಿಗೆ ಗಾಯ

21,384

Get real time updates directly on you device, subscribe now.


ಶಿರಾ: ಶಿರಾ ತಾಲೂಕಿನ ಚಿಕ್ಕನಹಳ್ಳಿ ರಾ.ಹೆ. 48ರಲ್ಲಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿ, 7 ಮಂದಿಗೆ ತೀವ್ರ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ಚಿಕ್ಕನಹಳ್ಳಿ ಬಳಿ ಟಾಟಾ ಏಸ್, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಟಾಟಾಏಸ್ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮೃತ ದುರ್ದೈವಿಗಳು ಕಲ್ಬುರ್ಗಿ ಜಿಲ್ಲೆ ಅರಳವಾಡಿ ಗ್ರಾಮದ ಭೀಮಾಬಾಯಿ (70), ಮಹಾಂತಪ್ಪ (50) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ವಾಸವಿದ್ದ ಇವರ ಕುಟುಂಬ ನಿವೃತ್ತಿಯ ಬಳಿಕ ಸ್ವಗ್ರಾಮಕ್ಕೆ ಮನೆಯ ಸಾಮಾನು ಸಾಗಿಸುವ ವೇಳೆ ಅಪಘಾತ ಸಂಭವಿಸಿದೆ. ಬಿ.ಎಂ.ಟಿ.ಸಿ.ಯಲ್ಲಿ ಚಾಲಕನಾಗಿದ್ದ ಮಹಾಂತಪ್ಪ ಅವರು ವರ್ಗಾವಣೆಯಾಗಿದ್ದ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಮನೆಯ ಸಾಮಾನು ಸಾಗಿಸುವ ವೇಳೆ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಕಳ್ಳಂಬೆಳ್ಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ರವಾನಿಸಲಾಗಿದೆ.

ಚಿಕ್ಕನಹಳ್ಳಿ ಬಳಿ ಮೇಲ್ವೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಉಂಟಾಗಿದ್ದು, ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್ ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಟಾಟಾ ಏಸ್ಗೆ ಖಾಸಗಿ ಬಸ್ ಬಂದು ಡಿಕ್ಕಿಯಾಗಿದೆ. ಟಾಟಾ ಏಸ್ನಲ್ಲಿದ್ದವರು ಕ್ಯಾಂಟರ್ ಹಾಗೂ ಬಸ್ ನಡುವೆ ಸಿಲುಕಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿ ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!