ಗ್ರಾಮ ಆಡಳಿತಾಧಿಕಾರಿಗಳಿಗೆ ಒತ್ತಡ ತಗ್ಗಿಸಿ

ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ

15

Get real time updates directly on you device, subscribe now.


ತುಮಕೂರು: ಜನರಿಗೆ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ವಿತರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಹಾಗೂ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎಸ್.ದೇವರಾಜು ನೇತೃತ್ವದಲ್ಲಿ ಗ್ರಾಮ ಆಡಳಿತಾಧಿ ಕಾರಿಗಳು ನಿಯೋಗ ತೆರಳಿ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಿಗೆ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಸ್.ದೇವರಾಜು, ಕಂದಾಯ ಇಲಾಖೆಯಿಂದ ಬೆಳೆ ಸಮೀಕ್ಷೆ, ಬಗರ್ ಹುಕ್ಕಂ ಭೂಮಿ ಗುರುತು ಮಾಡುವುದು ಸೇರಿದಂತೆ ಸುಮಾರು 17 ಮೊಬೈಲ್ ಆಪ್ಗಳನ್ನು ಸೃಜಿಸಿ ಕೆಲಸ ಮಾಡುವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಒತ್ತಡ ಹಾಕಲಾಗುತ್ತಿದೆ, ಆದರೆ ಈ ಮೊಬೈಲ್ ಆಪ್ ಗಳ ಆಪರೇಷನ್ ಮಾಡಲು ಅಗತ್ಯವಿರುವ ಅಧುನಿಕ ತಂತ್ರಜ್ಞಾನ ಒಳಗೊಂಡ ಮೊಬೈಲ್ ಆಗಲಿ, ಅದಕ್ಕೆ ಬೇಕಾದ ಇಂಟರ್ ನೆಟ್ ಸೌಲಭ್ಯ, ಪ್ರಿಂಟರ್ ಯಾವ ಪರಿಕರಗಳನ್ನು ನೀಡದೆ ಕೆಲಸ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.

ಮೇಲಾಧಿಕಾರಿಗಳು ಈ ಒತ್ತಡದಿಂದ ವಿಎಓ ಗಳಲ್ಲಿ ದೈಹಿಕ ಮತ್ತು ಮಾನಸಿಕ ಒತ್ತಡ ಹೆಚ್ಚಾಗಿ ಸಾವು, ನೋವು ಸಂಭವಿಸಿವೆ, ಅಲ್ಲದೆ ಕೆಲಸದ ಸಂದರ್ಭದಲ್ಲಿ ಹಲ್ಲೆಗೆ ಒಳಗಾಗುತ್ತಿದ್ದಾರೆ, ಆದ್ದರಿಂದ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಚಿತ್ರದುರ್ಗದಲ್ಲಿ ನಡೆದ ಸಂಘದ ರಾಜ್ಯ ಮಂಡಳಿ ತೀರ್ಮಾನದಂತೆ ಆಧಾರ್ ಸೀಡ್, ಲ್ಯಾಂಟ್ ಬೀಟ್, ಬಗೈರ್ ಹುಕುಂ, ಹಕ್ಕುಪತ್ರ, ನಮೂನೆ1-5 ರ ವೆಬ್ ಅಪ್ಲಿಕೇಷನ್ ಹಾಗೂ ಪೌತಿ ಖಾತೆ ಆಂದೋಲನ ಆಪ್ ಗಳ ಕಾರ್ಯ ಸ್ಥಗಿತಗೊಳಿಸುತ್ತಿದ್ದೇವೆ ಎಂದು ದೇವರಾಜು ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಿಂದ ವಂಚಿತರಾಗುತ್ತಿದ್ದು, ಸುಮಾರು 30 ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ, ರಾಜ್ಯದಲ್ಲಿ 1196 ಗ್ರೆಡ್ 1 ಗ್ರಾಮಪಂಚಾಯಿತಿ ಹಾಗೂ 304 ಕಸಬಾ ಹೋಬಳಿ ವೃತ್ತಗಳಲ್ಲಿ ಇರುವ ಗ್ರೆಡ್-01 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೇಲ್ದರ್ಜೆಗೇರಿಸಿ, ರಾಜಸ್ವ ನಿರೀಕ್ಷಕರು, ಪ್ರಥಮದರ್ಜೆ ಸಹಾಯಕರಿಗೆ ಪದೋನ್ನತ್ತಿ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ, ಅಲ್ಲದೆ ಪತಿ, ಪತ್ನಿ ಪ್ರಕರಣದಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ ಅಂತಿಮ ಆದೇಶ ಪ್ರಕಟಿಸುವುದು, ಕೆ ಪಿ ಆರ್ ಎಸ್ ನಿಯಮದಂತೆ ಸರಕಾರಿ ರಜಾ ದಿನಗಳಲ್ಲಿ ಮೆಮೋ ಹಾಕದಿರಲು, ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂಬದು ಗ್ರಾಮ ಆಡಳಿತ ಅಧಿಕಾರಿಗಳ ಒತ್ತಾಯವಾಗಿದೆ ಎಂದು ದೇವರಾಜು ನುಡಿದರು.

ಈ ವೇಳೆ ಗೌರವಾಧ್ಯಕ್ಷ ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಭಕ್ತವತ್ಸಲ, ಖಜಾಂಚಿ ಮೋಹನ್, ಉಪಾಧ್ಯಕ್ಷ ಯಮನೂರು, ಜಿಲ್ಲಾ ಸಹಕಾರ್ಯದರ್ಶಿ ರಾಘವೇಂದ್ರ ಸ್ವಾಮಿ, ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ಹೆಚ್.ಸಿ.ಹೇಮ ಸೇರಿದಂತೆ ಪದಾಧಿಕಾರಿಗಳು, ನಿರ್ದೇಶಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!