ಸಿದ್ದು ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

14

Get real time updates directly on you device, subscribe now.


ತುಮಕೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಿಟ್ ಅರ್ಜಿ ವಜಾ ಮಾಡಿ ತನಿಖೆಗೆ ಆದೇಶಿಸಿದ್ದ ರಾಜ್ಯಪಾಲರ ಆದೇಶವನ್ನ ಘನ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಲಾಯಿತು.

ಈ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ,ಯಾವಾಗಲೂ ನೈತಿಕತೆಯ ಮತ್ತು ಸಮಾಜ ವಾದದ ಪಾಠವನ್ನ ಇಡೀ ರಾಜ್ಯಕ್ಕೆ ಬೋಧಿಸುತ್ತಿದ್ದ ಸಿದ್ದರಾಮಯ್ಯನವರು ಇಂದು ಅವರ ಬೋಧನೆಗೆ ಅನುಗುಣವಾಗಿ ತಾವೇ ನಡೆದುಕೊಳ್ಳುವಂತಹ ಪರಿಸ್ಥಿತಿ ಉದ್ಭವವಾಗಿದೆ, ಮೂಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘನ ಉಚ್ಛ ನ್ಯಾಯಾಲಯವು ಸಿದ್ದರಾಮಯ್ಯನವರ ತನಿಖೆಗೆ ಆದೇಶಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಪಾರದರ್ಶಕ ತನಿಖೆಗೆ ಅನುವು ಮಾಡಿಕೊಡಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದರು.

ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಶುಭ್ರವಾಗಿದ್ದೇನೆ, ಒಂದು ಸಣ್ಣ ಕಪ್ಪು ಚುಕ್ಕೆಯು ಸಹ ಇಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದ ಸಿದ್ದರಾಮಯ್ಯನವರ ಮುಖ ಇಂದು ಪೂರ್ಣ ಭ್ರಷ್ಟಾಚಾರದಿಂದ ಕೂಡಿದೆ, ರಾಜ್ಯದ ಜನತೆಯ ದಾರಿ ತಪ್ಪಿಸಿ ಅಭಿವೃದ್ಧಿಯನ್ನ ಹಳ್ಳಕ್ಕೆ ತಳ್ಳಿ ದಲಿತರ ಪರಿಶಿಷ್ಟ ವರ್ಗದವರ, ರೈತರ ಹಾಗೂ ದೀನರ ಹಣವನ್ನ ಲೂಟಿ ಮಾಡುತ್ತಾ ಈ ಭ್ರಷ್ಟ ಸಿದ್ದರಾಮಯ್ಯನವರ ಸರ್ಕಾರ ಕಪ್ಪು ಹಣ ನಿರ್ಮಾಣದ ಕಾರ್ಖಾನೆಯಾಗಿದೆ, ಈ ಬಂಡತನ ಬಿಟ್ಟು ಸಿದ್ದರಾಮಯ್ಯನವರು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಈ ಮೂಲಕ ಆಗ್ರಹಿಸುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ವಿವಿಧ ಮೋರ್ಚಾಗಳ ಮುಖಂಡರು ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ನಗರ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!