ಹೆಚ್ ಎ ಎಲ್ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

11

Get real time updates directly on you device, subscribe now.


ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ಬಿದರಹಳ್ಳಕಾವಲಿನ ಎಚ್ ಎಎಲ್ ಘಟಕದಲ್ಲಿ ಹೊರ ರಾಜ್ಯಗಳಿಂದ ಆಗಮಿಸಿರುವ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ತಾಲೂಕಿನ ಅದಲಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಯಿತು, ಈ ಸಂದರ್ಭದಲ್ಲಿ ವೈದ್ಯ ಡಾ.ಚಂದನ್ ಮಾತನಾಡಿ, ಹಲವು ಭಾಗಗಳಿಂದ ಕಾರ್ಮಿಕರಾಗಿ ಆಗಮಿಸಿರುವ ಕಾರ್ಮಿಕರಿಗೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ಕೂಡ ಅದನ್ನು ಪರೀಕ್ಷಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಕಾರ್ಮಿಕರು ಒಂದೇ ಭಾಗದಲ್ಲಿ ಎಲ್ಲರೂ ಕೂಡ ಬದುಕು ನಡೆಸುವುದರಿಂದ ಒಬ್ಬರಿಗೆ ಅನಾರೋಗ್ಯ ಉಂಟಾದಲ್ಲಿ ಇನ್ನಿತರಿಗೂ ಕೂಡ ಅದು ಹಬ್ಬುವ ಸಾಧ್ಯತೆ ಇರುವುದರಿಂದ ಅವರಿಗೆ ಜಾಗೃತಿ ಹಾಗೂ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಡಾ.ಸಹನ, ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ರಮ್ಯಾ, ಪ್ರಿಯಾಂಕ, ಗುರುಪ್ರಸಾದ್ ಸಿಎಚ್ ಓ ಸಂತೋಷ್, ಆರೋಗ್ಯ ನಿರೀಕ್ಷಣಾಧಿಕಾರಿ ಜಯಣ್ಣ, ತಿಮ್ಮಕ್ಕ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ, ಕಾರ್ಮಿಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!