ಮೂಲಭೂತ ಸೌಕರ್ಯ ನೀಡಿ ಪ್ರಗತಿ ಕೇಳಿ

ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಒತ್ತಡ ತಪ್ಪಿಸಿ

9

Get real time updates directly on you device, subscribe now.


ತುಮಕೂರು: ಇಲಾಖೆಯ ಪ್ರಗತಿಯ ನೆಪದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಒತ್ತಡ ತಪ್ಪಿಸಿ, ಇಲಾಖೆ ಸೃಜಿಸಿರುವ ಮೊಬೈಲ್ ಆಫ್ ಗಳ ಬಳಕೆಗೆ ಸಂಬಂಧಿಸಿದಂತೆ ಸೂಕ್ತ ತರಬೇತಿ ಮತ್ತು ಅಗತ್ಯ ಪರಿಕರ ನೀಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಮೌನ ಪ್ರತಿಭಟನಾ ಧರಣಿ ನಡೆಸಿದರು.

ಪ್ರತಿಭಟನೆಯ ಹಿನ್ನೆಲೆ ಕುರಿತು ಮಾತನಾಡಿದ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎಸ್.ದೇವರಾಜು, ಕರ್ನಾಟರ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನಿರ್ದೇಶನದಂತೆ ಇಡೀ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಬಟ್ಟೆ ಧರಿಸಿ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡಿದ್ದೇವೆ, ಸೆಪ್ಟಂಬರ್ 27 ರಂದು ಜಿಲ್ಲೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಅಮಾನಿಕೆರೆ ಗಾಜಿನಮನೆಯಲ್ಲಿ ಸಮಾವೇಶಗೊಂಡು ಮೌನ ಪ್ರತಿಭಟನೆ ಮುಂದುವರೆಸಲಿದ್ದೇವೆ ಎಂದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತುಮಕೂರು ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ಹೇಮ ಮಾತನಾಡಿ, ಸರಕಾರ ಕೆಲಸಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ನೀಡದೆ ಪ್ರಗತಿ ಕೇಳುತ್ತಿದೆ, ಕೊರತೆಗಳ ನಡುವೆಯೇ ಶೇ.90 ರಷ್ಟು ಸಾಧನೆ ಮಾಡಲಾಗಿದೆ, ಕಚೇರಿಗಳಿಲ್ಲದೆ ಮಹಿಳಾ ಗ್ರಾಮ ಆಡಳಿತ ಅಧಿಕಾರಿಗಳ ಸ್ಥಿತಿ ಹೇಳ ತೀರದಾಗಿದೆ ಎಂದರು.

ಈ ವೇಳೆ ಗೌರವಾಧ್ಯಕ್ಷ ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಭಕ್ತವತ್ಸಲ, ಖಜಾಂಚಿ ಮೋಹನ್, ಉಪಾಧ್ಯಕ್ಷ ಯಮನೂರು, ಜಿಲ್ಲಾ ಸಹಕಾರ್ಯದರ್ಶಿ ರಾಘವೇಂದ್ರ ಸ್ವಾಮಿ, ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ಹೆಚ್.ಸಿ.ಹೇಮ ಇತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!