--ಇಲ್ಲಿ ಜಾಹೀರಾತು--

ಕಾರ್ ಗೆ ಬಸ್ ಡಿಕ್ಕಿ- ನಾಲ್ವರ ದುರ್ಮರಣ

On: April 3, 2025 2:45 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ.
ಕಾರು ಮೈಸೂರು ಕಡೆಗೆ ಹೊರಟಿತ್ತು, ಈ ವೇಳೆ ಎಕ್ಸ್ ಪ್ರೆಸ್ ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆ ಎಸ್ ಆರ್ ಟಿ ಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರನ್ನು ಬೆಂಗಳೂರಿನ ಜೆಪಿ ನಗರದವರೆಂದು ಗುರುತಿಸಲಾಗಿದೆ, 52 ವರ್ಷದ ಸತ್ಯಾನಂದ ರಾಜೇ ಅರಸ್, ಪತ್ನಿ ನಿಶ್ಚಿತಾ, ಚಂದ್ರು ಮತ್ತು ಸುವೇದಿನಿ ರಾಣಿ ಎಂದು ಗುರುತಿಸಲಾಗಿದೆ, ಸ್ಥಳಕ್ಕೆ ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now