--ಇಲ್ಲಿ ಜಾಹೀರಾತು--

ಪ್ರಪಾತಕ್ಕೆ ಉರುಳಿ ಬಿದ್ದ ಬಸ್

On: April 10, 2025 2:40 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚಿಕ್ಕಮಗಳೂರು: ಕೆ ಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ನಡೆದಿದೆ.
ಬಸ್ ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಭಾರೀ ಮಳೆ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ 30 ಅಡಿ ಇದ್ದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ.
ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅದರಲ್ಲಿ 30 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ಕೂಡಲೇ ಅವರನ್ನು ಜಯಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಸ್ ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ. ಬೆಂಗಳೂರು ಡಿಪೋಗೆ ಸೇರಿದ ಬಸ್ ಇದಾಗಿದ್ದು, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now