--ಇಲ್ಲಿ ಜಾಹೀರಾತು--

ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

On: April 16, 2025 2:36 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಳಗಾವಿ: ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಬೆಳಗಾವಿಯ ಹೊಸ ಗಾಂಧಿನಗರ ಬಳಿ ಬುಧವಾರರಂದು ನಡೆದಿದೆ.
ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಬಸವರಾಜ ಸುರವಿ (38) ಹಾಗೂ ಶಿವಲಿಂಗ ಸುರವಿ (20) ಮೃತ ದುರ್ದೈವಿ ಕಾರ್ಮಿಕರು. ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲಾಗಿದ್ದು, ಹೊಸ ಗಾಂಧಿ ನಗರದ ಬಳಿ ರಸ್ತೆಯ ಬದಿ ಮಣ್ಣು ಅಗೆಯುತ್ತಿದ್ದ ವೇಳೆ ಘಟನೆ ನಡೆದಿದೆ.ಪೈಪ್ ಲೈನ್ ಅಳವಡಿಕೆಗೆ ಆಳವಾಗಿ ಅಗೆಯಲು ಕಾರ್ಮಿಕರು ಕೆಳಗೆ ಇಳಿದಿದ್ದರು.
ಈ ವೇಳೆ ಮೇಲಿನಿಂದ ಮಣ್ಣು ಕುಸಿದು ಇಬ್ಬರೂ ಸಿಲುಕಿದ್ದಾರೆ. ಜತೆಗಿದ್ದ ಕಾರ್ಮಿಕರು ಹಾಗೂ ಸುತ್ತಲಿನ ಜನ ಕೂಡಲೇ ಸಹಾಯಕ್ಕೆ ಧಾವಿಸಿದರಾದರೂ ಮತ್ತಷ್ಟು ಮಣ್ಣು ಕುಸಿಯುವ ಭೀತಿಯಿಂದಾಗಿ ಯಾರೂ ಕೆಳಗೆ ಇಳಿಯುವ ಧೈರ್ಯ ತೋರಲಿಲ್ಲ. ಕೆಲ ಹೊತ್ತಿನ ನಂತರ ಜೆಸಿಬಿಯಿಂದ ಮಣ್ಣು ಎತ್ತಲಾಗಿದ್ದು, ತತ್ ಕ್ಷಣ ಕಾರ್ಮಿಕರನ್ನು ಹೊರಕ್ಕೆ ತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಆದರೆ ಇಬ್ಬರೂ ಬದುಕುಳಿಯಲಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now