--ಇಲ್ಲಿ ಜಾಹೀರಾತು--

ಸಂಪ್ ಸ್ವಚ್ಛಗೊಳಿಸುವಾಗ ಇಬ್ಬರು ಕಾರ್ಮಿಕರು ಸಾವು

On: May 21, 2025 2:19 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ನಗರ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಮಧುಗಿರಿ ತಾಲ್ಲೂಕಿನ ಮಾಗೋಡು ಗ್ರಾಮದ ಪ್ರತಾಪ್ (23), ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ತರೂರು ಗ್ರಾಮದ ವೆಂಕಟೇಶ್ (32) ಮೃತರು. ತರೂರಿನ ಮಂಜಣ್ಣ (42), ಯುವರಾಜ್ (32) ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್ ಬಯೋ’ ಎಂಬ ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ರಾಸಾಯನಿಕ ಸಂಗ್ರಹಿಸುವ ಸಂಪ್ ಸ್ವಚ್ಛತೆಗಾಗಿ ನಾಲ್ವರು ಸಂಪ್ ಒಳಗೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now