--ಇಲ್ಲಿ ಜಾಹೀರಾತು--

ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

On: June 9, 2025 2:09 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಆಗ್ಟ್ 15 ರಿಂದ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ.11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು.
ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ತಿರುಪತಿಯ ಗಾಂಧಿ ರಸ್ತೆಯಲ್ಲಿರುವ ಜಾಗದಲ್ಲಿ ವಸತಿ ಗೃಹ ನಿರ್ಮಿಸಲಾಗುತ್ತಿದೆ. ವಸತಿ ಗೃಹ ಸಂಕೀರ್ಣ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದರು.
ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಅರ್ಚಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ರೂ.34,37,000 ನೀಡಲಾಗಿದೆ. ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದರು.ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಯಂತ್ರಣ ಏರುವಂತ ಕ್ರಮ ಕೈಗೊಳ್ಳಲಾಗಿದೆ. ಮುಂದುವರೆದು ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್.15ರ ಬಳಿಕ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂಬುದಾಗಿ ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now