
ತುರುವೇಕೆರೆ: ಆರೋಗ್ಯ ಸಮಸ್ಯೆಗೆ ಬೇಸತ್ತು ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿದ್ದ ತಾಯಿ, ಮಗ ಇಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತರಾಗಿರುವ ಕಮಲಮ್ಮ (78) ಮಗ ರಘು (55) ಇಬ್ಬರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದರು, ಅನಾರೋಗ್ಯ ಸಹಿಸಲಾರದೇ ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ಶುಕ್ರವಾರ ಬೆಳಗಿನ ಜಾವ ಮನೆಯ ತೀರಿಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮೃತ ರಘು ಗೋಣಿ ತುಮಕೂರಿನ ರಾಮಾಂಜನೇಯ ಗ್ರಾಮಾಂತರ ಪ್ರೌಢಶಾಲೆಯಲ್ಲಿ ದ್ವೀತಿಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಅವಿವಾಹಿತರಾಗಿದ್ದ ಇವರು ತಾಯಿಯ ಯೋಗಕ್ಷೇಮ ನೋಡಿಕೊಂಡು ತಾಯಿ ಜೊತೆ ವಾಸವಾಗಿದ್ದರು, ನಮ್ಮನ್ನು ಕಾಡುತ್ತಿದ್ದ ಅನಾರೋಗ್ಯವೇ ನಮ್ಮ ಸಾವಿಗೆ ಕಾರಣ ಎಂದು ಸ್ಪಷ್ಟವಾಗಿ ಪತ್ರ ಬರೆದು ಈ ಕೃತ್ಯ ಮಾಡಿಕೊಳ್ಳುತ್ತಿರುವುದಕ್ಕೆ ತನ್ನ ತಮ್ಮ ರಾಜೇಶ್ನಲ್ಲಿ ಕ್ಷಮೆ ಯಾಚಿಸಿದ್ದಾರೆ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಗ್ಯ ಸಮಸ್ಯೆ- ತಾಯಿ, ಮಗ ನೇಣಿಗೆ ಶರಣು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


