--ಇಲ್ಲಿ ಜಾಹೀರಾತು--

ಅಪಘಾತದಲ್ಲಿ ಗ್ರಾಮ ಆಡಳಿತಾಧಿಕಾರಿ ಸಾವು

On: July 22, 2025 2:23 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ಸಾರಿಗೆ ಸಂಸ್ಥೆ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಆಡಳಿತಾಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಲ್ಲಹಳ್ಳಿ ಬಳಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಮೂಕನಾಯಕನಹಳ್ಳಿ ಗ್ರಾಮದ ನಿವಾಸಿ ಹಾಗೂ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಹೋಬಳಿಯ ಪರ್ತಿಹಳ್ಳಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಎಂ.ಹೆಚ್. ಮಹೇಶ್(31) ಎಂಬುವರೇ ಮೃತಪಟ್ಟಿರುವ ದುರ್ದೈವಿ,
ಗ್ರಾಮ ಆಡಳಿತಾಧಿಕಾರಿ ಮಹೇಶ್ ಅವರು ತುಮಕೂರಿನಿಂದ ತಮ್ಮ ಸ್ವಗ್ರಾಮ ಮೂಕನಾಯಕನಹಳ್ಳಿ ಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಗೊಲ್ಲಹಳ್ಳಿ ಸಮೀಪ ಸಾರಿಗೆ ಬಸ್ ಅಪ್ಪಳಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
ಗ್ರಾಮ ಆಡಳಿತಾಧಿಕಾರಿ ಮಹೇಶ್ ಅವರ ಪತ್ನಿಗೆ ಕಳೆದ 13 ದಿನಗಳ ಹಿಂದೆಯಷ್ಟೇ 2ನೇ ಮಗುವಿಗೆ ಜನ್ಮ ನೀಡಿದ್ದು, ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಗ್ರಾಮ ಆಡಳಿತಾಧಿಕಾರಿ ಮಹೇಶ್ ಅವರು ಪತ್ನಿ ಸಂಧ್ಯಾ, ಇಬ್ಬರು ಪುತ್ರಿಯರು ತಂದೆ-ತಾಯಿ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now